Header Ads
Header Ads
Breaking News

ಶಬರಿಮಲೆ ತೀರ್ಪು ಮರುಪರಿಶೀಲನೆಗೆ ಆಗ್ರಹ: ಸುಳ್ಯದಲ್ಲಿ ಅಯ್ಯಪ್ಪ ಭಕ್ತರ ಹಕ್ಕೊತ್ತಾಯ ಜಾಥಾ

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ಸನ್ನಿಧಿಗೆ ಮಹಿಳೆಯರ ಪ್ರವೇಶ ಕುರಿತಂತೆ ಸರ್ವೋಚ್ಛ ನ್ಯಾಯಾಲಯವು ನೀಡಿರುವ ತೀರ್ಪಿನ ಮರುಪರಿಶೀಲನೆ ಮಾಡುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನ್ಯಾಯ ಒದಗಿಸಿಕೊಡಬೇಕೆಂದು ಆಗ್ರಹಿಸಿ  ತಾಲೂಕಿನ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಬೃಹತ್ ಹಕ್ಕೊತ್ತಾಯ ಮೆರವಣಿಗೆ ಮತ್ತು ಸಭೆ ನಡೆಯಿತು.

ಸುಳ್ಯದ ಜ್ಯೋತಿ ವೃತ್ತದ ಬಳಿ ಯಿಂದ ಅಯ್ಯಪ್ಪ ಭಕ್ತರ ಮೆರವಣಿಗೆಯು ನಗ ರದ ಪ್ರಮುಖ ಬೀದಿಗಳಲ್ಲಿ ಸಾಗಿ ಬಳಿಕ ತಾಲೂಕು ಕಚೇರಿಯ ಮುಂಭಾಗದಲ್ಲಿ ಹಕ್ಕೊತ್ತಾಯ ಸಭೆ ನಡೆಯಿತು. ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಿಗೆ ಸರ್ವೋಚ್ಛ ನ್ಯಾಯಾಲಯವು ನೀಡಿರುವ ತೀರ್ಪನ್ನು ಮರುಪರಿಶೀಲಿಸಿ ಹಿಂದೂ ಸಮಾಜಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಮನವಿಯನ್ನು ಸಲ್ಲಿಸಲಾಯಿತು.ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ , ನ್ಯಾಯವಾದಿ ರಾಮಕೃಷ್ಣ ಅಮೈ ,  ಗುರುಸ್ವಾಮಿಗಳಾದ ಸಂತೋಷ್, ಕೆಂಚಪ್ಪ, ಪದ್ಮನಾಭ, ಮಾಧವ ಷೇಗೋ, ಜಿ.ಪಂ.ಸದಸ್ಯ ಹರೀಶ್ ಕಂಜಿಪಿಲಿ, ಪುಷ್ಪಾವತಿ ಮೊದಲಾದವರು ಭಾಗವಹಿಸಿದ್ದರು.

Related posts

Leave a Reply