Header Ads
Header Ads
Breaking News

ಶಾರದಾ ವಿದ್ಯಾಲಯದಲ್ಲಿ ವಿಜೃಂಭಣೆಯಿಂದ ನಡೆದ ವಾರ್ಷಿಕೋತ್ಸವ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಿದ ಗಣ್ಯರು

ಮಂಗಳೂರಿನ ಹೆಸರಾಂತ ವಿದ್ಯಾ ಸಂಸ್ಥೆಗಳಲ್ಲಿ ಒಂದಾಗಿರುವ ಶಾರದಾ ಎಜ್ಯುಕೇಶನ್ ಇನ್ಸಿಟ್ಯೂಷನ್‌ನ ಶಾರದಾ ವಿದ್ಯಾಲಯದ ವಾರ್ಷಿಕೋತ್ಸವವು ಸಂಭ್ರಮದಿಂದ ಜರುಗಿತು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ನೀಡಿ ಗಣ್ಯರು ಗೌರವಿಸಿದರು.

ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾರದಾ ವಿದ್ಯಾಲಯದ ವಾರ್ಷಿಕೋತ್ಸವ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಡಾಕ್ಟರ್ ರಾಘವೇಂದ್ರ ಭಟ್ ಅವರು ಮಾತನಾಡಿ, ಈ ಸಂಸ್ಥೆಯು ಅತ್ಯಂತ ಪ್ರಸಿದ್ಧಿಯನ್ನು ಪಡೆದಿದೆ. ಈ ಸಂಸ್ಥೆ ಇಷ್ಟು ಎತ್ತರಕ್ಕೆ ಬೆಳೆಯಲು ಅನೇಕ ಜನರ ಪರಿಶ್ರಮ ಇದೆ ಎಂದರು.ಆನಂತರ ಶಾರದಾ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷರಾದ ಎಂ.ಬಿ. ಪುರಾಣಿಕ್ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು.

ಈ ಸಂದರ್ಭದಲ್ಲಿ 2017-18ನೇ ಸಾಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣ್ಯರು ಪ್ರಶಸ್ತಿ ನೀಡಿ ಗೌರವಿಸಿದರು.
ಇದೇ ವೇಳೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವು ಅತ್ಯಂತ ಸುಂದರವಾಗಿ ಮೂಡಿಬಂತು.

ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ಎಸ್. ಕಲ್ಲೂರಾಯ ಕಾರ್ಯದರ್ಶಿಗಳಾದ ಎಂ.ಎಸ್ ಶಾಸ್ತ್ರಿ, ಟ್ರಸ್ಟಿ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಸೀತಾರಾಮ್, ಸುಧಾಕರ್ ರಾವ್ ಪೇಜಾವರ ಮತ್ತು ಹಳೆ ವಿದ್ಯಾರ್ಥಿಗಳಾದ ಆದಿತ್ಯ ಮಾರ್ಲ ಮತ್ತು ಪ್ರೇರಣಾ ಭಟ್ ಉಪಸ್ಥಿತರಿದ್ದರು.

Related posts

Leave a Reply