
ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮಗೂ ಕೂಡ ಕುಸ್ತಿ ಆಡಲು ಬರುತ್ತಿದೆ ಎಂದು ಈ ಹಿಂದೆ ಹೇಳಿಕೆ ನೀಡಿದ್ದರು. ಈಗಲ್ಟನ್ ರೆಸಾರ್ಟ್ನಲ್ಲಿ ನಡೆದಿರುವ ಕಾಂಗ್ರೆಸ್ ಶಾಸಕರ ಹೊಡೆದಾಟ ನೋಡಿ ಅದು ನಮಗೆ ಅರ್ಥವಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಕೋಟ ಶ್ರೀನಿವಾಸ್ ಪೂಜಾರಿ ಅವರು, ರಾಜ್ಯದಲ್ಲಿರುವ ಸರ್ಕಾರ ಸಂಪೂರ್ಣ ಸತ್ತುಹೋಗಿದೆ. ಶಾಸಕರು ಹೊಡೆದಾಡಿಕೊಂಡು ತಲೆ ಒಡೆದುಕೊಂಡು ಆಸ್ಪತ್ರೆಗೆ ದಾಖಲಾಗಿದ್ಸಾರೆ. ಹೊರಗೆ ಬಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವ ಡಿಕೆಶಿ ಅವರು ಏನೂ ಆಗಿಲ್ಲ ಎನ್ನುತ್ತಾರೆ. ಶಾಸಕರಿಗೆ ಏನಾಗಿದೆ ಎನ್ನುವುದೇ ರಾಜ್ಯದ ಜನರಿಗೆ ಗೊತ್ತಾಗದ ದಾರುಣ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.