Header Ads
Breaking News

ಶಿಕ್ಷಕರ ದಿನವನ್ನು ಬಹಿಷ್ಕರಿಸಿದ ಕಾಂಗ್ರೆಸ್

ಶಿಕ್ಷಕ ವರ್ಗವನ್ನು ನಿರ್ಲಕ್ಷಿಸಿದರೆ ವಿಶ್ವಗುರು ಆಗಲು ಸಾಧ್ಯವಿಲ್ಲ. ಭಾರತ ವಿಶ್ವಗುರು ಆಗಬೇಕೆಂದು ಬಿಜೆಪಿಯವರು ಹೇಳುತ್ತಿದ್ದಾರೆ. ಶಿಕ್ಷಕರು ವೇತನ ಇಲ್ಲದೆ, ಯಾವುದೇ ಪರಿಹಾರ ಸಿಗದೆ ಕಷ್ಟದಲ್ಲಿದ್ದಾರೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಶಿಕ್ಷಕರ ದಿನವನ್ನು ಕಾಂಗ್ರೆಸ್ ಬಹಿಷ್ಕರಿಸುತ್ತದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಹೇಳಿದರು.ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಲೆ ತೆರೆಯದೆ ಸಂಬಳ ಕೊಡದೆ ಸರ್ಕಾರ ಸತಾಯಿಸುತ್ತಿದೆ. ಎಷ್ಟೋ ಕಡೆ ಶಿಕ್ಷಕರನ್ನು ಕೆಲಸದಿಂದ ತೆಗೆದುಹಾಕಿದ್ದಾರೆ. ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಶಿಕ್ಷಕರ ದಿನವನ್ನು ಕಾಂಗ್ರೆಸ್ ಬಹಿಷ್ಕರಿಸುತ್ತದೆ.ರಾಜ್ಯದಲ್ಲಿ ಆನ್ ಲೈನ್ ಶಿಕ್ಷಣ ಶೇ.50 ರಷ್ಟು ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ.ಶಿಕ್ಷಕರ ವಿಚಾರದಲ್ಲಿ ಸರಕಾರಕ್ಕೆ ನಿಶ್ಚಿತ ಮಾರ್ಗಸೂಚಿ ಇಲ್ಲ ಎಂದು ಹೇಳಿದರು.

Related posts

Leave a Reply

Your email address will not be published. Required fields are marked *