Header Ads
Header Ads
Breaking News

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿಗಳನ್ನು ದೂರವಿಡಬೇಕು : ಸಚಿವ ವೆಂಕಟರಾವ್ ನಾಡಗೌಡ ಹೇಳಿಕೆ

ಕುಂದಾಪುರ: ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿಗಳನ್ನು ದೂರ ಇಡಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಹಿರಿಯ ನಾಯಕರುಗಳು ಅಳೆದು ತೂಗಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪನವರನ್ನು ಕಣಕ್ಕಿಳಿಸಿದ್ದಾರೆ ಎಂದು ರಾಜ್ಯ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.ಅವರು ಬೈಂದೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟೀಯನ್ನುದ್ದೇಶಿಸಿ ಮಾತನಾಡಿದರು.

ಕೇವಲ ಭಾಷಣಗಳಿಂದ ಬಡವನ ಹೊಟ್ಟೆ ತುಂಬಲ್ಲ. ಕೇಂದ್ರದಲ್ಲಿರುವ ಸರ್ಕಾರ ಮತ್ತು ಬಿಜೆಪಿ ನಾಯಕರುಗಳು ಬಣ್ಣಬಣ್ಣದ ಮಾತುಗಳನ್ನಾಡಿ ಮೋಡಿ ಮಾಡುತ್ತಾರೆ ವಿನಃ ಬಡವರಿಗೆ ಸಹಾಯವಾಗುವ ಯೋಜನೆ ಇದುವರೆಗೂ ರೂಪಿಸಿಲ್ಲ. ಜನರ ಸಮಸ್ಯೆಗಳಿಗೆ ಪರಿಹಾರವನ್ನು ಕೊಡಲಿಲ್ಲ. ಕೊಟ್ಟ ಭರವಸೆಗಳನ್ನು ಈಡೇಸುವ ಕೆಲಸಕ್ಕೆ ಕೇಂದ್ರ ಸರ್ಕಾರ ಮುಂದಾಗಿಲ್ಲ. ಮೋಡಿಯ ಮಾತುಗಳನ್ನಾಡಿ ಜನರನ್ನು ಮತ್ತೆ ಮತ್ತೆ ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಗಮನದಲ್ಲಿಟ್ಟುಕೊಂಡು ಮತದಾರರು ಆಲೋಚನೆ ಮಾಡಿ ಈ ಭಾರಿಯ ಚುನಾವಣೆಯಲ್ಲಿ ಮತಗಳನ್ನು ನೀಡಬೇಕು ಎಂದು ಸಚಿವ ನಾಡಗೌಡ ಮನವಿ ಮಾಡಿಕೊಂಡರು.

ನಂತರ ಮಾತನಾಡಿದ ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಪರೇಶ್ ಮೇಸ್ತಾ ಸಾವನ್ನು ಮುಂದಿಟ್ಟುಕೊಂಡು ಬಿಜೆಪಿ ಹೊಲಸು ರಾಜಕೀಯ ನಡೆಸಿತ್ತು. ಪರೇಶ್ ಮೇಸ್ತಾ ಹೆತ್ತವರನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡಿತ್ತು. ಆದರೆ ಇದುವರೆಗೂ ಸಿಬಿಐ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಬಿಜೆಪಿಗೆ ಪರೇಶ್ ಕುಟುಂಬದ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ ಕೊನೆತನಕವೂ ಹೋರಾಟ ನಡೆಸುತ್ತಿತ್ತು. ಚುನಾವಣಾ ಸಮಯದಲ್ಲಿ ರಾಜಕೀಯ ಲಾಭಕ್ಕೋಸ್ಕರ ಬಿಜೆಪಿ ಪರೇಶ್ ಮೇಸ್ತಾ ಸಾವನ್ನು ಬಳಸಿಕೊಂಡಿರುವುದ ದುರಂತ ಎಂದರು.

ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಜೆಡಿಎಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಾಸುದೇವ, ಕಾಂಗ್ರೆಸ್ ಮುಖಂಡರಾದ ರಾಜು ಪೂಜಾರಿ, ಸೈಯ್ಯದ್ ಯಾಸೀನ್ ಹಾಗೂ ಜೆಡಿಎಸ್ ಮುಖಂಡರಾದ ರವಿ ಶೆಟ್ಟಿ, ಮನ್ಸೂರ್ ಮರವಂತೆ ಮೊದಲಾದವರು ಹಾಜರಿದ್ದರು.

Related posts

Leave a Reply