Header Ads
Header Ads
Breaking News

ಶೀಘ್ರದಲ್ಲೇ ಲೋಕಸಭಾ ಚುನಾವಣಾ ಪಟ್ಟಿ ಅಂತಿಮ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ 

ಮಂಗಳೂರು: ಮುಂದಿನ ಲೋಕಸಭಾ ಚುನಾವಣಾ ಪಟ್ಟಿಯನ್ನು ಮೂರ್ನಾಲ್ಕು ದಿನಗಳೊಳಗಾಗಿ ಅಂತಿಮಗೊಳಿಸಲಾಗುವುದು. ಅದಕ್ಕಾಗಿ ನಾಳೆ ಬೆಂಗಳೂರಿನಲ್ಲಿ ಸಚಿವರಾದ ಹೆಚ್.ಡಿ.ರೇವಣ್ಣ,ಪರಮೇಶ್ವರ್ , ವಿಶ್ವನಾಥ್ ಹಾಗೂ ನಾನು ಸೇರಿ ನಾಲ್ಕು ಜನ ಸಭೆ ನಡೆಸಿ ಪಟ್ಟಿ ಅಂತಿಮಗೊಳಿಸಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಲ್ಲಿ ಖಾಸಗಿ ಕಾರ್ಯಕ್ರಮದ ವೇಳೆಯಲ್ಲಿ ವಿ೪ನ್ಯೂಸ್‌ನೊಂದಿಗೆ ಮಾತನಾಡಿದರು. ಕ್ಷೇತ್ರ ಹೊಂದಾಣಿಕೆ ಕುರಿತು, ನಾಳೆ ಬೆಂಗಳೂರಲ್ಲಿ ಸಭೆ ನಡೆಸಲಾಗುವುದು. ಯಾವುದೇ ರೀತಿಯಲ್ಲಿ ತೊಂದರೆ ಆಗ ರೀತಿಯಲ್ಲಿ ಹೊಂದಾಣಿಕೆ ಮಾಡಲಾಗುವುದು. ಸಣ್ಣಪುಟ್ಟ ವ್ಯತ್ಯಾಸ ಕಂಡು ಬಂದರೆ, ದೆಹಲಿ ಮಟ್ಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.
ಇನ್ನು ಕುಮಾರಸ್ವಾಮಿ ಬಿಜೆಪಿ ಜೊತೆಗೆ ಮೈತ್ರಿ ಮಾಡಲು ಒಲವು ತೋರುತ್ತಿದ್ದಾರೆ ಅನ್ನೋ ಈಶ್ವರಪ್ಪ ಹೇಳಿಕೆ ಪ್ರತಿಕ್ರಿಯಿಸಿದ ಗುಂಡೂರಾವ್, ಈಶ್ವರಪ್ಪ ಹೇಳಿಕೆಗೆ ಬೆಲೆ ಕೊಡುವ ಅಗತ್ಯವಿಲ್ಲ, ಸಿಎಂ ಕುಮಾರ ಸ್ವಾಮಿ ಅವರೇ ಉತ್ತರ ಕೊಡುತ್ತಾರೆ ಎಂದು ಹೇಳಿದರು.
ಇನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಹರಿಹಾಯ್ದ ಗುಂಡೂರಾವ್, ಇಂತಹ ವ್ಯಕ್ತಿಗಳಿಗೆ ಹೆಚ್ಚು ಪ್ರಚಾರ ಕೊಡಬಾರದು. ಅನಂತ್ ಕುಮಾರ್ ಹೆಗ್ಡೆ ಈ ರೀತಿ ಹೇಳಿಕೆ ನೀಡುವುದು ಬಿಟ್ಟು ತನ್ನ ಕ್ಷೇತ್ರದ ಅಭಿವೃದ್ಧಿಗೆ ಗಮನಹರಿಸಲಿ ಎಂದು ಸಂಸದ ಹೆಗ್ಡೆ ಅವರ ’ದೇಶ ಆಳಬೇಕಾದದ್ದು ಭಾರತೀಯ ರಕ್ತ ಆಗಬೇಕು, ಇಟಲಿ ರಕ್ತವಲ್ಲ’ ಎನ್ನುವ ಹೇಳಿಕೆಗೆ ತಿರುಗೇಟು ನೀಡಿದರು.

Related posts

Leave a Reply

Your email address will not be published. Required fields are marked *