Header Ads
Header Ads
Breaking News

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಹೆಚ್‌ಡಿಡಿ ಕುಟುಂಬ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಕುಟುಂಬ ಸದಸ್ಯರು ಶೃಂಗೇರಿ ಶಾರದಾಂಬೆಯ ಕ್ಷೇತ್ರಕ್ಕೆ ಭೇಟಿ ನೀಡಿದ ಶ್ರೀ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಹೆಚ್.ಡಿ. ದೇವೇಗೌಡರು, ಪತ್ನಿ ಚೆನ್ನಮ್ಮ, ಸಿಎಂ ಹೆಚ್‌ಡಿಕೆ ಅನಿತಾ ಕುಮಾರಸ್ವಾಮಿ, ಮಗ ನಿಖಿಲ್ ಕುಮಾರಸ್ವಾಮಿಯವರು ಪೂಜೆ ಸಲ್ಲಿಸಿದರು. ಬಳಿಕ ಹೋಮದಲ್ಲಿ ಕುಟುಂಬ ಸದಸ್ಯರು ಭಾಗಿಯಾಗಿದ್ದರು. ಇದೇ ವೇಳೆ ಪ್ರತಿಕ್ರಿಯೆ ನೀಡಿದ ನಿಖಿಲ್ ಕುಮಾರಸ್ವಾಮಿ ಮಂಡ್ಯ ಜನತೆ ನಾಡಿಮಿಡಿತ ಅರಿತು ನನಗೆ ಲೋಕಸಭೆಗೆ ಸ್ಪರ್ಧಿಸಲು ಜೆಡಿಎಸ್ ಟಿಕೆಟ್ ನಿಡಲಾಗುತ್ತಿದೆ. “ಜೆಡಿಎಸ್ ನಾಯಕರು ಮಂಡ್ಯದ ಜನತೆಯ ಅಭಿಪ್ರಾಯ ಪರಿಗಣಿಸಿ ನನಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿದ್ದಾರೆ” ಎಂದರು.

Related posts

Leave a Reply

Your email address will not be published. Required fields are marked *