Header Ads
Breaking News

ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿಯಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಮಂಗಳೂರಿನ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ಯುನಿವರ್ಸಿಟಿಯ ಕಾಲೇಜ್ ಆಫ್ ಸೋಶಿಯಲ್ ಸೈನ್ಸಸ್ ಮತ್ತು ಹ್ಯೂಮಾನಿಟೀಸ್ ವತಿಯಿಂದ ‘ಉನ್ನತ ಶಿಕ್ಷಣದಲ್ಲಿ ಸಂಶೋಧನೆ, ಕಲಿಕೆ ಮತ್ತು ಆಡಳಿತ’ ಎನ್ನುವ ವಿಚಾರದ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ ನಡೆಯಿತು. 

 ಕಾರ್ಯಕ್ರಮವನ್ನು ಪ್ರಾದೇಶಿಕ ವಿಜ್ಞಾನ ಕೇಂದ್ರ ಪಿಲಿಕುಳ ನಿಸರ್ಗಧಾಮದ ನಿರ್ದೇಶಕರಾದ ಡಾ.ಕೆ.ವಿ.ರಾವ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ್ರು. ಬಳಿಕ ಮಾತನಾಡಿದ ಅವರು, ಭಾರತ ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ದೇಶ. ಅದರಲ್ಲಿ ಶಿಕ್ಷಣ ಕ್ಷೇತ್ರವೂ ಒಂದಾಗಿದ್ದು, ಭಾರತದ ಶಿಕ್ಷಣ ಅಭಿವೃದ್ಧಿಯತ್ತ ಮುನ್ನುಗ್ಗುತ್ತಿದೆ ಎಂದು ಹೇಳಿದ್ರು.
ಇದೇ ವೇಳೆ ಉನ್ನತ ಶಿಕ್ಷಣದ ಬಗೆಗಿನ ಕೈಪಿಡಿಯನ್ನು ಪಿಲಿಕುಳ ನಿಸರ್ಗ ಧಾಮದ ನಿರ್ದೇಶಕರಾದ ಡಾ. ಕೆವಿ ರಾವ್ ಹಾಗೂ ತ್ರಿವೇಣಿ ಆಟ್ರ್ಸ್ ಆ್ಯಂಡ್ ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಿ ಗೋಪಿನಾಥ್ ಅವರು ಬಿಡುಗಡೆಗೊಳಿಸಿದ್ರು. ಈ ಸಂದರ್ಭ ಶ್ರೀನಿವಾಸ್ ಯೂನಿವರ್ಸಿಟಿಯ ಉಪ ಕುಲಪತಿ ಡಾ.ಪಿಎಸ್ ಐತಾಲ್ ಹಾಗೂ ಐಕ್ಯೂಎಸಿ ಕೋ ಆರ್ಡಿನೇಟರ್ ಡಾ. ಲವೀನಾ ಡಿ ಮೆಲ್ಲೋ ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *