Header Ads
Header Ads
Breaking News

ಶ್ರೀರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ:ನಗರದ ಮಂಗಳಾ ಕ್ರೀಡಾಂಗಣದಲ್ಲಿ ಪಂದ್ಯಾಟ

 ಮಂಗಳೂರಿನ ಬಂಟ್ಸ್‌ಹಾಸ್ಟೆಲ್ ಸಮೀಪದಲ್ಲಿರುವ ಶ್ರೀರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವನ್ನು ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಾಗಿ ವಿವಿಧ ಕ್ರೀಡಾಕೂಟವನ್ನು ನಡೆಸಲಾಯ್ತು.

 ಮಂಗಳೂರಿನ ಹೆಸರಾಂತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಶ್ರೀರಾಮಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವನ್ನು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಇನ್ನು ಕ್ರೀಡಾಕೂಟವನ್ನು ಶಾಲೆಯ ಹಳೇಯವಿದ್ಯಾರ್ಥಿ ಹಾಗೂ ಕ್ರೀಡಾಪಟು ಅಕ್ಷಯ ಆಳ್ವಾ ಅವರು ಉದ್ಘಾಟಿಸಿದ್ರು. ಈ ವೇಳೆ ಮಾತನಾಡಿದ ಅವರು, ವಿದ್ಯಾಭ್ಯಾಸ ಜೊತೆಯಲ್ಲಿ ಕ್ರೀಡೆಯೂ ಮುಖ್ಯವಾಗುತ್ತೆ, ಜೊತೆಗೆ ಕ್ರೀಡೆಯಲ್ಲಿ ಮಕ್ಕಳು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.ಬಳಿಕ ಬಂಟರ ಯಾನೆ ನಾಡವರ ಮಾತೃ ಸಂಘದ ಕೋಶಾಧಿಕಾರಿ ರವೀಂದ್ರನಾಥ್ ಎಸ್.ಶೆಟ್ಟಿ ಮಾತನಾಡಿ, ಶಿಸ್ತ್ರಿನ ಮೂಲಕ ಕ್ರೀಡೆಯಲ್ಲಿ ಭಾಗವಹಿಸಬೇಕು. ಮುಂದಿನ ದಿನಗಳಲ್ಲಿ ಉತ್ತಮ ಕ್ರೀಡಾಪಟುಗಳಾಗಿ ರೂಪುಗೊಳ್ಳಲು ಸಾಧ್ಯ ಅಂತಾ ಹೇಳಿದ್ರು.
ಶಾಲಾ ಮುಖ್ಯೋಪಾಧ್ಯಾಯಿನಿ ಉಷಾ.ಎಸ್.ಶೆಟ್ಟಿ ಮಾತನಾಡಿ, ಕ್ರೀಡಾಸ್ಪೂರ್ತಿಯನ್ನ ಮೈಗೂಡಿಸಿಕೊಂಡು,ಉತ್ತಮ ಕ್ರೀಡಾಳು ಆಗಬೇಕೆಂದ್ರು.

ಈ ವೇಳೆ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕರಾದ ವಸಂತ್ ಶೆಟ್ಟಿ , ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷೆ ಹೇಮಲತಾ ಸೇರಿದಂತೆ ಇನ್ನಿತರು ಉಪಸ್ಥಿತಿರಿದ್ದರು. ಇನ್ನ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹಮಾನ ವಿತರಿಸಿದ್ರು. ಮಾತ್ರವಲ್ಲದೇ ವಿದ್ಯಾರ್ಥಿಗಳು ವಿವಿಧ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸಿದ್ರು.

Related posts

Leave a Reply