Header Ads
Breaking News

ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟ ಪ್ರಕರಣ: ಕರ್ನಾಟಕ, ಕರಾವಳಿಯಲ್ಲೂ ಕಟ್ಟೆಚ್ಚರ!!

ಶ್ರೀಲಂಕಾದಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಕರಾವಳಿ ಕಾವಲು ಪೊಲೀಸ್ ಪಡೆ ಕಟ್ಟೆಚ್ಚರ ವಹಿಸಿದ್ದು, ಮಂಗಳೂರು ನಗರ ಪೊಲೀಸರು ಕೂಡ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದ್ದಾರೆ, ಭದ್ರತೆಯ ಬಗ್ಗೆ ನಿಗಾ ವಹಿಸಿದ್ದಾರೆ.ಬೀಟ್ ವ್ಯವಸ್ಥೆಯಲ್ಲಿರುವ ಪೊಲೀಸರು ನಗರದಲ್ಲಿ ಜನರು ಅಧಿಕ ಸಂಖ್ಯೆಯಲ್ಲಿ ಸೇರುವ ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾಲ್‌ಗಳಲ್ಲಿ ಮತ್ತು ಪ್ರವಾಸಿ ತಾಣಗಳಲ್ಲಿ ಹೆಚ್ಚು ಜಾಗೃತ ಸ್ಥಿತಿಯಲ್ಲಿದ್ದಾರೆ. ಸಂಶಯಾಸ್ಪದ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸುತ್ತಿದ್ದಾರೆ. ಕೆಲವು ವಸತಿ ಗೃಹಗಳಲ್ಲಿ ಶಂಕಿತ ವ್ಯಕ್ತಿಗಳು ಇದ್ದಾರೆಯೇ ಎನ್ನುವ ಬಗ್ಗೆ ತಪಾಸಣೆಯನ್ನು ನಡೆಸುತ್ತಿದ್ದಾರೆ.

Related posts

Leave a Reply

Your email address will not be published. Required fields are marked *