Header Ads
Header Ads
Breaking News

ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕ ಭಾಷಣ- ಎಸ್‌ಡಿಪಿಐ ಬಂಟ್ವಾಳ ಉಪಾಧ್ಯಕ್ಷ ಖಲಂದರ್ ಪರ್ತಿಪ್ಪಾಡಿ ಆರೋಪ

ವಿಟ್ಲ: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಡಂಬು ಘಟಕದ ಜಂಟಿ ಆಶ್ರಯದಲ್ಲಿ ಕಂಡಬುವಿನಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಇಸ್ಲಾಂ ಧರ್ಮದ ಬಗ್ಗೆ ನಿಂದನೆ ಹಾಗೂ ಪ್ರಚೋದನಾತ್ಮಕ ಭಾಷಣ ಮಾಡಿದ ಘಟನೆ ಖಂಡನೀಯವಾಗಿದೆ. ಈ ಕಾರ್ಯಕ್ರಮಕ್ಕೆ ಪೊಲೀಸರ ಹಾಗೂ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ ಕಾರ್ಯಕ್ರಮ ಆಯೋಜಿಸಿವುದು ಕಾನೂನು ಬಾಹಿರವಾಗಿದೆ. ಪುಷ್ಪರಾಜ್ ಭಟ್ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರದ ಉಪಾಧ್ಯಕ್ಷ ಖಲಂದರ್ ಪರ್ತಿಪ್ಪಾಡಿ ಆಗ್ರಹಿಸಿದರು.ಅವರು ಎಸ್‌ಡಿಪಿಐ ವಿಟ್ಲ ಪಡ್ನೂರು ವಲಯ ಸಮಿತಿ ವತಿಯಿಂದ ವಿಟ್ಲದ ಪ್ರೆಸ್ ಕ್ಲಬ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಪುಷ್ಟರಂಗ ಭಟ್ ತನ್ನ ಭಾಷಣದಲ್ಲಿ ಮುಸ್ಲಿಮರ ಧಾರ್ಮಿಕ ಭಾವನೆಗಳನ್ನು ಹೀನಾಯವಾಗಿ ನಿಂದಿಸಿದ್ದಾರೆ. ಇಸ್ಲಾಂ ಧರ್ಮದ ಬಗ್ಗೆ ಮುಸಲ್ಮಾನರ ಮುಂಜಿ, ಮಸೀದಿಯಲ್ಲಿ ಮೊಳಗುವ ಅಝಾನ್ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದರು.ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಶಾಕೀರ್ ಅಳಕೆಮಜಲು ಮಾತನಾಡಿ ಇಂತಹ ಒಂದು ಕೀಳು ಮಟ್ಟದ ಭಾಷಣ ಮಾಡಿ ಹಿಂದು ಮುಸ್ಲಿಮರ ನಡುವೆ ದ್ವೇಷ ಉಂಟು ಮಾಡುವ ವ್ಯಕ್ತಿಗಳನ್ನು ಕಾರ್ಯಕ್ರಮದ ಸಂಘಟಕರು ಆಹ್ವಾನಿಸಬಾರದು. ಈ ಬಗ್ಗೆ ಹಿಂದು ಕಾರ್ಯಕರ್ತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಸದಸ್ಯ ಶಾಕೀರ್ ಅಳಕೆಮಜಲು, ಎಸ್‌ಡಿಪಿಐ ಮುಖಂಡರಾದ ಮೊಹಮ್ಮದ್ ಕಡಂಬು, ಅಝೀಜ್ ಕಡಂಬು, ಸೈರ್ ಪರ್ತಿಪ್ಪಾಡಿ, ರಹೀಂ ವಿಟ್ಲ ಉಪಸ್ಥಿತರಿದ್ದರು.

Related posts

Leave a Reply