Header Ads
Header Ads
Breaking News

ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿವಿಧ ಸ್ಪರ್ಧೆಗಳು. ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸ್ಪರ್ಧೆ. ಗೋಪಾಲಕೃಷ್ಣ ದೇವಸ್ಥಾನದ ಸಹಯೋಗದಿಂದ ಕಾರ್ಯಕ್ರಮ.

ಮಂಗಳೂರು: ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಕಾಲೇಜು ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಇವರ ಸಹಯೋಗದಲ್ಲಿ ಶಕ್ತಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿವಿಧ ಸ್ವರ್ಧೆಗಳು ನಡೆದವು.ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ವ್ಯವಸ್ಥಾಪಕರಾಗಿರುವ ಪೂರ್ಣಿಮಾ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಕ್ತಿ ವಸತಿ ಶಾಲೆಯ ಸ್ಥಾಪಕ ಹಾಗೂ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೋಕ್ತೆಸರ ಕೆ.ಸಿ. ನಾಯ್ಕ್ ಮಾತನಾಡಿ, ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮಕ್ಕಳಿಗೆ ವಿವಿಧ ಸ್ವರ್ಧೆಗಳನ್ನು ಏರ್ಪಡಿಸಿ ಬಹುಮಾನ ನೀಡುವ ಮೂಲಕ ಅವರಲ್ಲಿನ ಸಂತೋಷದಲ್ಲಿ ಶ್ರೀ ಕೃಷ್ಣನನ್ನು ಕಾಣಬಹುದಾಗಿದೆ ಎಂದರು.ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮೂಡುಶೆಡ್ಡೆ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಯ ಸುಬ್ರಾಯ ಪೈ, ಅಡಳಿತ ಮಂಡಳಿಯ ಸದಸ್ಯೆ ಸಗುಣ ಸಿ ನಾಯ್ಕ್, ಸಂಸ್ಥೆಯ ಪ್ರಮುಖ ಸಲಹೆಗಾರ ರಮೇಶ್ ಕೆ ಹಾಗೂ ಸಂಸ್ಥೆಯ ಅಭಿವೃದ್ಧಿ ಅಧಿಕಾರಿ ನಸೀಮ ಬಾನು ಹಾಗೂ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಯೋಜಕಿ ಶ್ರೀಮತಿ ನೀಮ ಸಕ್ಸೇನ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತಾಧಿಕಾರಿ ಕೃಷ್ಣ ಕುಮಾರ್, ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಶಕ್ತಿ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Related posts

Leave a Reply