Header Ads
Header Ads
Header Ads
Breaking News

ಶ್ರೀ ಗುಜರಾತಿ ಮಹಾಜನ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮಂಗಳಾ ಸ್ಟೇಡಿಯಂನಲ್ಲಿ ನಡೆದ ವಾರ್ಷಿಕ ಕ್ರೀಡೋತ್ಸವ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ

ಮಂಗಳೂರಿನ ಕುದ್ರೋಳಿ ಸಮೀಪದ ಶ್ರೀ ಗುಜರಾತಿ ಮಹಾಜನ್ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಾರ್ಷಿಕ ಕ್ರೀಡೋತ್ಸವವು ಮಂಗಳಾ ಸ್ಟೇಡಿಯಂನಲ್ಲಿ ನಡೆಯಿತು.

ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆದ ಕ್ರೀಡೋತ್ಸವವನ್ನು ಮಂಗಳೂರು ಬಾಸ್ಕೆಟ್‌ಬಾಲ್ ಕ್ಲಬ್‌ನ ಕೋಚ್ ಆದಿತ್ಯ ಮೆಹಾಲೆ ಬೆಲೂನ್ ಹಾರಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.  ಅನಂತರ ಶ್ರೀ ಗುಜರಾತಿ ಮಹಾಜನ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಹಿತೇಂದ್ರ ಜೆ. ಕೊಟ್ಟಾರಿ ಮಾತನಾಡಿ, ಪ್ರತಿಯೊಬ್ಬರು ಮಕ್ಕಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಶಾಲಾ ಮಟ್ಟದಲ್ಲಿ ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ಶ್ರೀ ಗುಜರಾತಿ ಮಹಾಜನ್ ಇಂಗ್ಲಿಷ್‌ಮೀಡಿಯಂ ಸ್ಕೂಲ್‌ನ ಮುಖ್ಯೋಪಧ್ಯಾಯರಾದ ಅಶ್ವಿನಿ ಶೆಣೈ, ದೈಹಿಕ ಶಿಕ್ಷಕ ಮುಹಮ್ಮದ್ ರಾಝಿಕ್ ಮತ್ತಿತ್ತರರು ಉಪಸ್ಥಿತರಿದ್ದರು.

ವರದಿ: ನಾಗರಾಜ್ ಮಂಗಳೂರು

Related posts

Leave a Reply