Header Ads
Header Ads
Breaking News

ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನದ ಬಗ್ಗೆ ಜಾಗೃತಿ ಕಾರ್ಯಕ್ರಮ

ಮಂಗಳೂರಿನ ಮಣ್ಣಗುಡ್ಡದಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ಮಾದಕ ದ್ರವ್ಯ ವ್ಯಸನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು.

ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ, ಶ್ರೀಗೋಕರ್ಣನಾಥೇಶ್ವರ ಪದವಿ ಪೂರ್ವ ಕಾಲೇಜು ಮತ್ತು ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶೇಖರ್ ಪೂಜಾರಿ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು. ಇವತ್ತಿನ ದಿನದಲ್ಲಿ ಯುವಜನತೆ ಕೆಟ್ಟ ಚಟದತ್ತ ಮುಖಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜಾಗೃತಿ ಕಾರ್ಯಕ್ರಮಗಳು ಅಗತ್ಯ ಎಂದು ಹೇಳಿದರು.

ಆನಂತರ. ಡಾ. ಶ್ರೀಕುಮಾರ್ ಮೆನನ್ ಅವರು ಮಾದಕ ವ್ಯಸನದ ಒಳಿತು ಮತ್ತು ಕೆಡಕುಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಕಾರ್ಯಕ್ರಮದಲ್ಲಿ ಸತೀಶ್ ರೈ, ಕಾರ್ಯಕ್ರಮದ ಸಂಯೋಜಕರಾದ ರಜನಿ ದಿನೇಶ್, ಸುಧಾ ಶೆಣೈ, sಸುದಾರಾಮ್ ರೈ, ಕಾಲೇಜಿನ ಪ್ರಿನ್ಸಿಪಾಲ್ ಡಾ. ರೇಣುಕಾ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply