Header Ads
Breaking News

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ಎ.20ರಿಂದ 25ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಮಂಗಳೂರು: ಶಕ್ತಿನಗರದಲ್ಲಿರುವ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ ಎಪ್ರಿಲ್ 20ರಿಂದ 25ರ ವರೆಗೆ ನಡೆಸಲು ನಿಶ್ಚಯಿಸಿದ್ದು, ಆ ಪ್ರಯುಕ್ತ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಷ್ಠಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಮೋನಪ್ಪ ಭಂಡಾರಿ ಹೇಳಿದರು.

ಅವರು ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಎಲ್ಲಾ ಕಾರ್ಯಕ್ರಮಗಳಿಗೆ ನಾಡಿನ ಪ್ರಮುಖ ಮಠಗಳ ಸ್ವಾಮೀಜಿಗಳು, ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಗಣ್ಯರು, ಅತಿಥಿ ಅಭ್ಯಗತರು ಪಾಲ್ಗೊಳ್ಳಲಿದ್ದಾರೆ. ಎಪ್ರಿಲ್ 18ರಂದು ಬ್ರಹ್ಮಕಲಶದ ಅಂಗವಾಗಿ ಹೊರೆಕಾಣಿಕೆ ಮೆರವಣಿಗೆ ಬಂಟ್ಸ್ ಹಾಸ್ಟೇಲ್ ಮೈದಾನದಿಂದ ಹೊರಟು ಶ್ರೀ ಕ್ಷೇತ್ರವನ್ನು ತಲುಪಲಿದೆ. ನಂತರ ಸಭಾ ಕಾರ್ಯಕ್ರಮ ನಡೆಯಲಿದೆ. ಎಪ್ರಿಲ್ 20ರಂದು ತಂತ್ರಿಗಳ ಆಗಮನ ಸ್ವಾಗತದ ನಂತರ ಬ್ರಹ್ಮಕಲಶೋತ್ಸವ ವಿದ್ಯುಕ್ತವಾಗಿ ಉದ್ಘಾಟನೆಯಾಗಲಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರು ಉದ್ಘಾಟನೆ ಮಾಡಲಿದ್ದು. ಸಚಿವ ಅಂಗಾರ ಹಾಗೂ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಅಂದು ಸಂಜೆ ಶಕ್ತಿ ರೆಸಿಡೆನ್ಸಿ ಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು, ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಗೋಪಾಲಕೃಷ್ಣ ದೇವರ ಅನುಗ್ರಹದಿಂದ ಈ ಧಾರ್ಮಿಕ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹೇಳಿದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಪುರುಷೋತ್ತಮ್, ಕೋಶಾಧಿಕಾರಿ ಕೃಷ್ಣಪ್ರಸಾದ್ ಮಡ್ತಿಲ, ಆಡಳಿತ ಮೊಕ್ತೇಸರರಾದ ಡಾ.ಕೆ.ಸಿ. ನಾಯಕ್, ಸುಧೀರ್ ಕಣ್ಣೂರು, ಶಕಿಲ ಕಾವಾ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *