Header Ads
Breaking News

ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶ್ರೀ ಸರಸ್ವತಿ ವಿದ್ಯಾಲಯ ಕನ್ಯಾನದಲ್ಲಿ ಯೋಗ ದಿನಾಚರಣೆಯನ್ನು ಜೂನ್ 21ರಂದು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾಲಯದ ಸಂಚಾಲಕರಾದ ಶ್ರೀ ಈಶ್ವರ ಪ್ರಸಾದ್‍ರವರು ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಯೋಗದ ಮಹತ್ವವನ್ನು ತಿಳಿ ಹೇಳಿದರು. ಯೋಗ ತರಬೇತುದಾರರಾದ ಶ್ರೀಯುತ ಶಶಾಂಕ್ ಪದ್ಯಾಣರವರಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ಮಾಡಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮುಖ್ಯಸ್ಥೆ ಹಾಗೂ ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮಧುರಾ ಈಶ್ವರ ಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರಸ್ವತಿ ಹಾಗೂ ಎಲ್ಲಾ ಶಿಕ್ಷಕರು ಪಾಲ್ಗೊಂಡಿದ್ದರು.

Related posts

Leave a Reply

Your email address will not be published. Required fields are marked *