Header Ads
Header Ads
Breaking News

ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ ತಾಲೂಕಿನ ನಾವೂರು ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು ಜ. 11-19ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆಯ ಸರಳ ಸಮಾರಂಭ ದೇವಸ್ಥಾನದ ವಠಾರದಲ್ಲಿ ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೈದು ಮಾತನಾಡಿ, ದೇವಳದ ಬ್ರಹ್ಮಕಲಶೋತ್ಸವಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರಲ್ಲದೆ ಗ್ರಾಮಸ್ಥರ, ಊರ ಪರವೂರಿನ ಭಕ್ತ ಜನರ ಸಹಕಾರವನ್ನು ಯಾಚಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಸದಸ್ಯರಾದ ಪೂರ್ಣಿಮಾ, ಅರ್ಚಕ ವೆಂಕಟದಾಸ ಭಟ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಕಂಬಳಕೂಟಕ್ಕೆ ತೆರಳುತ್ತಿದ್ದ ರಾಜ್ಯ ಮುಜರಾಯಿ ಸಚಿವ, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದ ಜೀರ್ಣೋದ್ದಾರ ಕಾರ್ಯದ ಕಾಮಗಾರಿಯನ್ನು ವೀಕ್ಷಿಸಿದರು.

Related posts

Leave a Reply

Your email address will not be published. Required fields are marked *