Header Ads
Header Ads
Breaking News

ಸಂಪೂರ್ಣ ಹದಗೆಟ್ಟ ದೂಪದಕಟ್ಟೆ- ಹಳ್ನಾಡಿ ರಸ್ತೆ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಕುಂದಾಪುರದ ಕಾವ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೂಪದಕಟ್ಟೆ- ಹಳ್ನಾಡಿನ ಸುಮಾರು 6 ಕಿ.ಮೀ. ಸಂಪರ್ಕ ರಸ್ತೆ ಕಳೆದ ಹಲವು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ಕುಂದಾಪುರ ಹಾಗೂ ಸುತ್ತಮುತ್ತಲಿನ ಭಾಗದ ಶಾಲಾ ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಗ್ರಾಮಸ್ಥರಿಗೆ ತೊಂದರೆಯಾಗುತ್ತಿರುವುದರಿಂದ ಕೂಡಲೇ ಸರಿಪಡಿಸಲು ಆಗ್ರಹಿಸಿ ಶುಕ್ರವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಸಂಬಂಧಪಟ್ಟ ಸ್ಥಳೀಯಾಡಳಿತವು ಕೂಡಲೇ ಸ್ಪಂದಿಸಿ ಸಾರ್ವಜನಿಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಸೂಕ್ತ ಪರಿಹಾರ ಸಿಗದಿದ್ದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಪ್ರತಿಭಟನಾಕಾರರು ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ಈ ಹಲ್ನಾಡಿನಿಂದ ಕಂಡ್ಲೂರಿನಿಂದ ಬಕ್, ರಿಕ್ಷಾ, ಇತರೆ ವಾಹನಗಳ ಮೂಲಕ ಕಂಡ್ಲೂರು ಗ್ರಾಮ ಪಂಚಾಯತ್ ಕಚೇರಿಗೆ ಆಗಮಿಸಿ, ಪ್ರಭಾರ ಪಿಡಿಒಗೆ ಮನವಿ ಪತ್ರ ಸಲ್ಲಿಸಿದರು.

Related posts

Leave a Reply