Header Ads
Header Ads
Breaking News

ಸಂಪ್ಯ ಎಸೈ ಹಾಗೂ 3 ಸಿಬ್ಬಂದಿಗಳನ್ನು ಅಮಾನತಿಗೆ ಆಗ್ರಹ ಹಿಂದೂ ಹಿತರಕ್ಷಣಾ ವೇದಿಕೆಯ ನಿರಂತರ ಧರಣಿ ಪುತ್ತೂರು ಉಪವಿಭಾಗಾಧಿಕಾರಿ ಕಚೇರಿ ಬಳಿ ಪ್ರತಿಭಟನೆ

ಹಿಂದೂ ಮುಖಂಡರ ಮೇಲೆ ಹಾಗೂ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುತ್ತಿರುವ ಪುತ್ತೂರು ಗ್ರಾಮಾಂತರ ಸಂಪ್ಯ ಪೋಲೀಸ್ ಠಾಣೆಯ ಸಬ್ ಇನ್ಸ್‌ಸ್ಪೆಕ್ಟರ್ ಹಾಗೂ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಬೇಕೆಂದು ಎಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಪ್ರತಿಭಟನಾ ಧರಣಿಯನ್ನು ಹಮ್ಮಿಕೊಂಡಿದೆ. ಪ್ರತಿಭಟನಾ ಸಭೆಯಲ್ಲಿ  ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ಅಕ್ರಮ ದಂಧೆಗಳು ನಡೆಯುತ್ತಿವೆ.

ಪೊಲೀಸ್ ಅಧಿಕಾರಿ ಇಂತಹ ಅಕ್ರಮ ಚಟುವಟಿಕೆಗಳಿಗೆ ತಡೆ ಹಾಕುವುದನ್ನು ಬಿಟ್ಟು ಅಮಾಯಕ ಹಿಂದುಗಳ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಹಿಂದುಗಳ ರಕ್ಷಣೆಗಾಗಿ ಕೆಲಸ ಮಾಡುತ್ತಿರುವ ಹಿಂದು ಸಂಘಟನೆಗಳ ಮುಖಂಡರ ಮೇಲೆ ಹಲ್ಲೆ ನಡೆಸುತ್ತಾರೆ ಎಂದು ಅವರು ದೂರಿದರು. ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆ ಪ್ರಾಂತ ಪ್ರದಾನ ಕಾರ್ಯದರ್ಶಿ ಉಲ್ಲಾಸ್ ಟಿ, ಜಿಲ್ಲಾ ಕಾರ್ಯದರ್ಶಿ ರವಿರಾಜ್ ಶೆಟ್ಟಿ ಕಡಬ, ಬಿಜೆಪಿ ಮಂಡಲ ಪುತ್ತೂರು ನಗರಾಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಯುವ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಶಿವರಂಜನ್, ಮತ್ತಿತರು ಉಪಸ್ಥತಿರಿದ್ದರು.