Header Ads
Breaking News

ಸಂಸದರಾಗಿ ನಳಿನ್ ಜಿಲ್ಲೆಯನ್ನು ಅಭಿವೃದ್ಧಿ ಮಾಡಿಲ್ಲ : ಜೆಡಿಎಸ್ ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಶಾಫಿ ಆರೋಪ

ಬಂಟ್ವಾಳ: ನಳಿನ್ ಕುಮಾರ್ ಕಟೀಲು 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೂ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎಸ್. ಮುಹಮ್ಮದ್ ಶಾಫಿ ಹೇಳಿದ್ದಾರೆ.

ಗುರುವಾರ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯು ಅಭಿವೃದ್ಧಿ ಕಾರ್ಯದಲ್ಲಿ ಸಂಪೂರ್ಣವಾಗಿ ಹಿಂದುಳಿದಿದ್ದು, ಸ್ವತಃ ಪಕ್ಷದ ಮುಖಂಡರೇ ನಳಿನ್ ವಿರುದ್ಧ ಅಸಮಧಾನ ವ್ಯಕ್ತಪಡಿಸುವ ಮೂಲಕ ಮೈತ್ರಿ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ ಎಂದು ಹೇಳಿದರು.

ಕಳೆದ ಪ್ರಧಾನಿ ಮೋದಿ ನೇತೃತ್ವದ ಸರಕಾರವು ನೀಡಿರುವ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ. ನಿತ್ಯುಪಯೋಗಿ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್ ಉತ್ಪನ್ನಗಳ ದಾಖಲೆಯ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ನೋಟ್‌ಬ್ಯಾನ್ ಮಾಡಿ ದೇಶದ ಆರ್ಥಿಕಮಟ್ಟವನ್ನು ಕುಸಿಯುವಂತೆ ಮಾಡಿದೆ ಎಂದ ಅವರು, ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಎಲ್ಲ ಧರ್ಮದವರನ್ನು ಒಂದಾಗಿಸುವ ನಾಯಕತ್ವ ಗುಣವನ್ನು ಹೊಂದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆಲುವು ಸಾಧಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಕ್ಷೇತ್ರಾಧ್ಯಕ್ಷ ಬಿ.ಮೋಹನ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗೋಮ್ಸ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್, ಮುಖಂಡರಾದ ರಹೀಂ ಪಿ.ಎ., ಉಮೇಶ್, ಯುವಜನತಾ ದಳದ ಅಧ್ಯಕ್ಷ ಜಿ.ಎ.ಅಮಾನುಲ್ಲಾ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *