Header Ads
Header Ads
Breaking News

ಸಂಸದೆ ಶೋಭಾ ಕರಂದ್ಲಾಜೆ ಅವರ ಕ್ಷೇತ್ರದಲ್ಲಿ ಕೆಲಸ ಮಾಡಲಿ ಬೇರೆ ಕ್ಷೇತ್ರದತ್ತ ತಲೆಹಾಕುವ ಅಗತ್ಯವಿಲ್ಲ ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿಕೆ

ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದಲ್ಲಿ ಕೆಲಸ ಮಾಡಲಿ, ಇತರ ಕ್ಷೇತ್ರಗಳ ಉಸಾಬರಿ ಯಾಕೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೋಮು ಗಲಭೆಯಾದಾಗ ಪ್ರಚೋದನಕಾರಿ ಹೇಳಿಕೆಯನ್ನು ಶೋಭಾ ನೀಡುತ್ತಿದ್ದಾರೆ. ಇವರ ಹೇಳಿಕೆ ಮತ್ತಷ್ಟು ಗಲಭೆಗೆ ಕಾರಣವಾಗುತ್ತಿದೆ. ಅದರ ಬದಲು ಅವರ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡಲಿ ಎಂದು ಸಲಹೆ ನೀಡಿದರು.

ಪ್ರತಿಭಾ ಕುಳಾಯಿ ಅವರು ದೀಪಕ್ ರಾವ್ ಹಾಗೂ ಬಶೀರ್ ಅವರ ಕೊಲೆ ಪ್ರಕರಣಗಳ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಸಂಘ ಪರಿವಾರದ ಮುಖಂಡರು ಕೇವಲ ಕೋಮು ಪ್ರಚೋದನಾಕಾರಿ ವಿಚಾರಗಳನ್ನಷ್ಟೇ ಎತ್ತಿ ಹಿಡಿಯುತ್ತಾರೆ. ಆದರೆ ಅಮಾಯಕರ ಹತ್ಯೆಯ ವಿಚಾರದಲ್ಲಿ ಏನೂ ಮಾತನಾಡುತ್ತಿಲ್ಲ ಎಂದರು.

ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಕೇಶವ ಸನಿಲ್ ಮಾತನಾಡಿ ದೀಪಕ್ ರಾವ್ ಕೊಲೆ ಪ್ರಕರಣದ ಹಿಂದಿರುವ ಸತ್ಯಾಸತ್ಯತೆಯ ಕುರಿತಂತೆ ಪೊಲೀಸರು ತನಿಖೆ ನಡೆಸಿ ಕೊಲೆಗೆ ಕಾರಣ ಏನು ಎಂಬುದನ್ನು ಬಯಲಿಗೆಳೆಯಬೇಕು ಎಂದು ಆಗ್ರಹಿಸಿದರು. ಮಾಧ್ಯಮಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಬಶೀರ್ ಬೈಕಂಪಾಡಿ, ಸದಾಶಿವ ಶೆಟ್ಟಿ ಮತ್ತಿತರು ಉಪಸ್ಥಿತರಿದ್ದರು.