Header Ads
Breaking News

ಸಚಿವ ಕೋಟಾ – ಖಾದರ್ ಟ್ವೀಟ್ ವಾರ್

ದ.ಕ ಜಿಲ್ಲಾಧಿಕಾರಿ ವರ್ಗಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಯು.ಟಿ ಖಾದರ್ ಟ್ವಿಟ್ಟರ್ ಮೂಲಕ ರಾಜ್ಯ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ. ನೈತಿಕ ಪೊಲೀಸ್  ಗಿರಿ ಮಾಡಿದವರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿತ್ತು. ಆದ್ರೆ ಎಚ್ಚರಿಕೆ ನೀಡಿದ್ದಕ್ಕೆ ಸಿಂಧು ರೂಪೇಶ್ ಅವರಿಗೆ ಕೊಲೆ ಬೆದರಿಕೆ ಒಡ್ಡಲಾಗಿದೆ. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷಿಸೋ ಬದಲು ಡಿಸಿಯವರಿಗೆ ಶಿಕ್ಷೆ ನೀಡಿದೆ. ಇಂಥಹ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಧೈರ್ಯ ತುಂಬಬೇಕಿತ್ತು. ಆದ್ರೆ ಇಲ್ಲಿನ ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಕೊರೊನಾ ಜನರ ಉಸಿರು ಗಟ್ಟಿಸುತ್ತಿದ್ರೆ, ಬಿಜೆಪಿಗರು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ ಎಂದು ಖಾದರ್ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. 

ಇನ್ನು ರಾಜ್ಯ ಸರಕಾರದ ವಿರುದ್ದ ಕಿಡಿಕಾರಿದ್ದ ಮಾಜಿ ಸಚಿವ ಯು.ಟಿ ಖಾದರ್ ವಿರುದ್ದ ಇದೀಗ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಟ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೆ ಶಾಸಕ ಖಾದರ್ ಕೊರೊನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಕಾನೂನುಗಳನ್ನು ಉಲ್ಲಂಘಿಸಿರುವ ಪ್ರಕರಣದ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿದ್ದು “ಕರೋನಾ ನಿಯಂತ್ರಣಕ್ಕೆ ಪ್ರತಿಪಕ್ಷಗಳ ಸಹಕಾರ ಜಿಲ್ಲಾಡಳಿತ ಕೋರಿದೆ. ದುರಾದೃಷ್ಟಕ್ಕೆ, ಶವಸಂಸ್ಕಾರದ ಹೆಸರಿನಲ್ಲಿ ನಿಯಮಗಳನ್ನು ಉಲ್ಲಂಘಿಸಿ ಪ್ರಚಾರ ಪಡೆಯುತ್ತಿರುವುದು ವಿಪಕ್ಷದ ಜನಪ್ರತಿನಿಧಿಗಳಿಗೆ ಶೋಭೆಯಲ್ಲ” ಎಂದಿದ್ದಾರೆ.

 

Related posts

Leave a Reply

Your email address will not be published. Required fields are marked *