Header Ads
Header Ads
Header Ads
Breaking News

ಸಚಿವ ರೈ ಹೆಸರಿನಲ್ಲಿರುವ ಕಟ್ಟಡ ಅಕ್ರಮ

ಬಂಟ್ವಾಳ ಪೇಟೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರ ಹೆಸರಿನಲ್ಲಿರುವ ಕಟ್ಟಡ ಅಕ್ರಮವೆಂದು ಆರೋಪಿಸಿ ಬಿಜೆಪಿ ಸದಸ್ಯರು ಪುರಸಭಾ ಕಾರ್ಯಲಯದ ಮುಂದೆ ಪ್ರತಿಭಟನೆ ನಡೆಸುತ್ತಿದ್ದು ಈ ಸಂದರ್ಭ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದು ಎಂದು ಪುರಸಭಾಧ್ಯಕ್ಷ ರಾಮಕೃಷ್ಣ ಆಳ್ವ ಸ್ಪಷ್ಟಪಡಿಸಿದ್ದಾರೆ.

ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು ಸಚಿವ ರಮನಾಥ ರೈಯವರು ಬೂಡ ಮತ್ತು ಪುರಸಭೆಯಿಂದ ಅನುಮತಿ ಪಡೆದು ಕಟ್ಟಡ ನಿರ್ಮಿಸಿದ್ದು ಕದ ಸಂಖ್ಯೆಯನ್ನು ಪಡೆದುಕೊಂಡಿದ್ದಾರೆ. ಸಚಿವರು ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳನ್ನು ಕಂಡು ಸಹಿಸಲಾಗದೆ ಮುಂದಿನ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಇಂತಹ ಆರೋಪ ಮಾಡುತ್ತಿದ್ದಾರೆ. ಬಿಜೆಪಿಯವರು ನಗರ ವ್ಯಾಪ್ತಿಯಲ್ಲಿ ಹೊಂದಿರುವ ಅಕ್ರಮ ಕಟ್ಟಡಗಳ ವಿರುದ್ದ ಕ್ರಮಕೈಗೊಳ್ಳಬಹುದೆಂಬ ಭೀತಿಯಿಂದ ಧರಣಿ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ಸುದ್ದಿಗೋಷ್ಟಿಯಲ್ಲಿ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಬೂಡ ಅಧ್ಯಕ್ಷ ಸದಾಶಿವ ಬಂಗೇರ, ಪುರಸಭೆ ಸದಸ್ಯರಾದ ವಾಸು ಪೂಜಾರಿ, ಗಂಗಾಧರ್, ಮಹಮ್ಮದ್ ಶ‌ಋ‌ಈಪ್, ಜಗದೀಶ ಕುಂದರ್, ವಸಂತಿ ಸಿ., ಚಂಚಲಾಕ್ಷಿ, ಪ್ರಭಾ ಸಾಲ್ಯಾನ್ ಮತ್ತಿತ್ತರರು ಹಾಜರಿದ್ದರು.

ವರದಿ: ಸಂದೀಪ್ ಬಂಟ್ವಾಳ

Related posts

Leave a Reply