Header Ads
Header Ads
Header Ads
Breaking News

ಸಚಿವ ರೋಶನ್ ಭೇಗ್ ವಿರುದ್ಧ ಮೂಡುಬಿದಿರೆಯಲ್ಲಿ ಪ್ರತಿಭಟನೆ ಬಿಜೆಪಿ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಸಚಿವ ರೋಶನ್ ಭೇಗ್ ಅವರ ವಿರುದ್ಧ ಬಿಜೆಪಿ ನೇತೃತ್ವದಲ್ಲಿ ಮೂಡುಬಿದಿರೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಬಿಜೆಪಿ ಮುಖಂಡ ಉಮಾನಾಥ ಕೋಟ್ಯಾನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ಸಚಿವನಾಗಿ ಜವಾಬ್ದಾರಿಯುತ ಸ್ಥಾನದಲ್ಲಿರಬೇಕಾದ ರೋಶನ್ ಭೇಗ್ ದೇಶದ ಪ್ರಧಾನಿಯನ್ನು ಅವಾಚ್ಯ ಪದಗಳಿಂದ ನಿಂದಿಸುವ ಮೂಲಕ ಜವಾಬ್ದಾರಿಯನ್ನು ಮರೆತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿಚ ಸಂಪುಟದಿಂದ ಕೈ ಬಿಡಬೇಕೆಂದು ಆಗ್ರಹಿಸಿದರು.


ಈ ವೇಳೆ ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಸುದರ್ಶನ , ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸುಖೇಶ್ ಶೆಟ್ಟಿ ,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ.ಜಗದೀಶ ಅಧಿಕಾರಿ ಮತ್ತಿತರು ಉಪಸ್ಥತರಿದ್ರು.

Related posts

Leave a Reply