Header Ads
Breaking News

ಸಚಿವ ಸಂಪುಟ ವಿಸ್ತರಣೆ ಸಿಎಂಗೆ ಬಿಟ್ಟ ವಿಚಾರ-ಉಡುಪಿಯಲ್ಲಿ ನಳಿನ್ ಕುಮಾರ್ ಕಟೀಲ್ ಹೇಳಿಕೆ

ಉಡುಪಿ: ಸಚಿವ ಸಂಪುಟ ವಿಸ್ತರಣೆಯೇ ಅಥವಾ ಸರ್ಜರಿ ಎಂಬುದು ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಅವರೇ ಎಲ್ಲ ತೀರ್ಮಾನ ತೆಗೆದುಕೊಂಡು ಬಳಿಕ ಪಕ್ಷದಲ್ಲಿ ಮಾತುಕತೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿಗೆ ಹೆಚ್ಚಿನ ಸಚಿವ ಸ್ಥಾನ ಸಿಗಬಹುದೇ ಅಥವಾ ಕಳೆದುಕೊಳ್ಳಬಹುದೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಎಲ್ಲವನ್ನು ಗಮನಿಸುತ್ತಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಉತ್ತಮ ಆಡಳಿತ ನಡೆಸಲು ಮತ್ತು ರಾಜ್ಯದ ಹಿತದೃಷ್ಠಿಯಿಂದ ಸರಿಯಾದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ನಮಗಿಂತ ಹಿರಿಯರು ಆಗಿರುವುದರಿಂದ ಅವರಿಗೆ ನಾವು ಸಲಹೆ ನೀಡಬೇಕಾಗಿಲ್ಲ ಎಂದು ಹೇಳಿದರು.
ವರದಿ: ಪಲ್ಲವಿ ಸಂತೋಷ್ ಉಡುಪಿ

Related posts

Leave a Reply

Your email address will not be published. Required fields are marked *