Header Ads
Header Ads
Breaking News

ಸಜೀಪ ಮುನ್ನೂರು : ಕುಡಿಯುವ ನೀರಿನ ಶಾಶ್ವತ ಪರಿಹಾರ ನೀಡುವಂತೆ ಅವರು ಒತ್ತಾಯ

ಜಿಲ್ಲಾ ಪಂಚಾಯತ್ ಅನುದಾನದಡಿ ಸುಮಾರು 28 ಲಕ್ಷ ರೂ. ವೆಚ್ಚದಲ್ಲಿ ಸಜೀಪ ಮುನ್ನೂರು ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗಿದೆ. ಕಳೆದ 8 ತಿಂಗಳಿಂದ ಘಟಕವು ಕಾರ್ಯನಿರ್ವಸುತ್ತಿಲ್ಲ. ಇದರಿಂದ ಜನರಿಗೆ ಕುಡಿಯಲು ನೇರವಾಗಿ ನದಿಯಿಂದಲೇ ನೀರು ಪೂರೈಕೆ ಮಾಡುತ್ತಿದೆ. ಈ ನೀರು ಕಲುಷಿತವಾಗಿದ್ದು, ಕುಡಿಯಲು ಯೋಗ್ಯವಾಗಿಲ್ಲ ಎಂದು ಆರೋಗ್ಯ ಇಲಾಖೆಯು ಮಾಹಿತಿ ನೀಡಿದೆ. ಇದರಿಂದ ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಅಭಾವ ಉಂಟಾಗಿದೆ ಎಂದು ಸಜೀಪಮುನ್ನೂರು ಗ್ರಾಪಂ ಸದಸ್ಯರು ಹಾಗೂ ಗ್ರಾಮಸ್ಥರು ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಶುದ್ಧೀಕರಣ ನೀರಿನ ಘಟಕದಿಂದ 100 ಮನೆಗಳಿಗೆ ಮಾತ್ರ ನೀರು ಸರಬರಾಜು ಆಗುತ್ತಿದೆ. ಆದರೆ, ಸಜೀಪ ಮುನ್ನೂರು ಗ್ರಾಮದಲ್ಲಿ ಸುಮಾರು 756 ಮನೆಗಳಿಗೆ ತಲುಪುತ್ತಿಲ್ಲ ಎಂದು ಅವರು, ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಶಾಶ್ವತ ಪರಿಹಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಜೀಪಮುನ್ನೂರು ಗ್ರಾಪಂ ಸದಸ್ಯ ಸದಸ್ಯರಾದ ಹಂಝ, ಮಜೀದ್ ಆಲಾಡಿ, ಸಮೀರ್ ನಂದಾವರ, ಗ್ರಾಮ ಸಮಿತಿಯ ಹಕೀಂ, ಫಾರೂಕ್, ಎಸ್‍ಡಿಪಿಐ ಸದಸ್ಯರಾದ ಸಿದ್ದೀಕ್, ಮುಸ್ತಫ, ಸಾದಿಕ್, ಸವಾದ್ ಉಪಸ್ಥಿತರಿದ್ದರು.

Related posts

Leave a Reply