Header Ads
Header Ads
Header Ads
Breaking News

ಸದ್ಭಾವನಾ ಉದ್ದೇಶದಿಂದ ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ನಮ್ಮ ರಕ್ಷಣೆಗೆ ನಾವೇ ಮುಂದಾಗಬೇಕು ಪುತ್ತೂರಿನಲ್ಲಿ ಶಾಸಕಿ ಶಕುಂತಳಾ ಶೆಟ್ಟಿ

ಪುತ್ತೂರು : ಅತೀ ಸೂಕ್ಷ್ಮ ಜಿಲ್ಲೆಯಾಗಿರುವ ದಕ್ಷಿಣ ಕನ್ನಡದಲ್ಲಿ ಭಯದ ವಾತಾವರಣವಿರುವ ಹಿನ್ನಲೆಯಲ್ಲಿ ಸದ್ಭಾವನೆ ಮೂಡಿಸುವ ಉದ್ದೇಶದೊಂದಿಗೆ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಭಾನುವಾರ ಪುತ್ತೂರು ಬಸ್ಸು ನಿಲ್ದಾಣದ ಬಳಿಯಲ್ಲಿರುವ ಗಾಂಧಿ ಕಟ್ಟೆಯಲ್ಲಿ ಬೆಳಗ್ಗಿನಿಂದ ಸಂಜೆ ತನಕ ಸದ್ಭಾವನಾ ಉಪವಾಸ ಸತ್ಯಾಗ್ರಹ ನಡೆಯಿತು.

ಉಪವಾಸ ಸತ್ಯಾಗ್ರಹದಲ್ಲಿ ಗಾಂಧೀ ಪ್ರತಿಮೆಗೆ ಪುಷ್ಪಾರ್ಚನೆಗೈದು ಮಾತನಾಡಿದ ಶಾಸಕಿ ಶಕುಂತಳಾ ಶೆಟ್ಟಿ ಅವರು ನಮ್ಮ ನಡುವೆ ಜಾತಿ, ಧರ್ಮಗಳೆಂಬ ಕಂದಕ ಬೆಳೆದು ನಿಂತಿದೆ. ಇವೆಲ್ಲ ದೂರವಾಗಿ,ನಾವೆಲ್ಲ ಒಂದೇ ಎಂಬ ಭಾವನೆಯಿಂದ ಸಮಾಜದಲ್ಲಿ ಶಾಂತಿ, ಸೌಹಾರ್ದತೆಯಿಂದ ಬಾಳುವಂತಾಗಬೇಕು. ನಮ್ಮ ರಕ್ಷಣೆಗೆ ನಾವೇ ಮುಂದಾಗಬೇಕು.ಇದಕ್ಕಾಗಿ ಒಗ್ಗಟ್ಟಿನಿಂದ ಸಮಾಜಮುಖಿಯಾಗಿ ಮುನ್ನುಗ್ಗಬೇಕು ಎಂದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅವರು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ. ಮೋಹನ್, ಪುತ್ತೂರು ಪುಡಾ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ನಗರ ಕಾಂಗ್ರೆಸ್ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ, ಮಾನವ ಬಂಧುತ್ವ ವೇದಿಕೆ ಸಂಚಾಲಕ ವಿಲ್ರೆಡ್ ಡಿಸೋಜಾ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಲುಕ್ಮಾನ್,ಸೇವಾದಳದ ತಾಲ್ಲೂಕು ಸಂಚಾಲಕ ಜೋಕಿಂ ಡಿ.ಸೋಜಾ,ತಾಲ್ಲೂಕು ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ಮುಸ್ಲಿಂ ಧರ್ಮಗುರು ಎಸ್.ಪಿ. ದಾರಿಮಿ, ಕಾರ್ಯದರ್ಶಿ ಎಂ.ಜಿ. ರಫೀಕ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯಾಕೂಬ್ ಹಾಜಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣಪ್ರಸಾದ್ ಆಳ್ವ, ನಗರಸಭೆ ಸದಸ್ಯೆ ವಾಣಿಶ್ರೀಧರ್, ಪಕ್ಷದ ಮುಖಂಡರಾದ ರೋಶನ್ ರೈ, ಲ್ಯಾನ್ಸಿ ಮಸ್ಕರೇನಸ್, ವಿ.ಚ್. ಅಬ್ದುಲ್ ಶಕೂರ್ ಮತ್ತಿತರರು ಇದ್ದರು.

Related posts

Leave a Reply