Breaking News

ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್,  ಉಚ್ಚಿಲದಲ್ಲಿ ಬಿಜೆಪಿ ಸಾಧನಾ ಸಮಾವೇಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರ ಮೂರು ವರ್ಷ ಪೂರೈಸಿದ ಸಂದರ್ಭವಾಗಿ ಪಕ್ಷದ ಕಾರ್ಯಕರ್ತರಿಂದ ಉಚ್ಚಿಲ ಮಹಾಲಕ್ಷ್ಮಿ ಸಭಾಂಗಣದಲ್ಲಿ ಆಯೋಜಿಸಲಾದ ಸಬ್‌ಕಾ ಸಾಥ್ ಸಬ್‌ಕಾ ವಿಕಾಸ್ ಸಾಧನಾ ಸಮಾವೇಶ ಹಾಗೂ ಮೋದಿ ಫೆಸ್ಟ್ ಕಾರ್ಯಕ್ರಮವನ್ನು ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸಿದರು.
ಅನಂತರ ಮಾತನಾಡಿದ ಸಚಿವೆ ನಿರ್ಮಲಾ, ಮೂರು ವರ್ಷಗಳಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವಂತಹ ಬದಲಾವಣೆಗಳ ಮೂಲಕ ಭಾರತವು ವಿಶ್ವಕ್ಕೇ ಮಾದರಿಯಾಗಿದೆ. ಬೆಲೆಯೇರಿಕೆ, ಹಣದುಬ್ಬರಗಳ ಹತೋಟಿ, ದೇಶದ ಗೌರವ, ರಕ್ಷಣೆಗಳನ್ನು ಕಾಪಾಡುವ ಮೂಲಕ ವಿದೇಶಿಗರಿಗಿದ್ದ ನಮ್ಮ ಚಿತ್ರಣವೇ ಮಾರ್ಪಾಟಾಗಿದೆ. ಕ್ರಮಬದ್ಧವಾದ ಅನುಷ್ಠಾನಗಳಿಂದ ಜನಪರ ಯೋಜನೆಗಳು ಗ್ರಾಮೀಣ ಭಾಗಗಳಿಗೂ ತಲುಪಿಸಲು ಸಾಧ್ಯವಾದ ಪರಿಯನ್ನು ತಿಳಿಸುತ್ತಾ ಭಾರತವು ಪ್ರಪಂಚಕ್ಕೇ ಗುರುವಾಗಲಿದೆ ಎಂದರು.
ವೇದಿಕೆಯಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಸಂಸದೆ ಶೋಭ ಕರಂದ್ಲಾಜೆ, ಕಾಪು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಜಿ.ಪಂ. ಅಧ್ಯಕ್ಷ ಧಿನಕರ ಬಾಬು, ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಉದಯಕುಮಾರ್, ಯಶಪಾಲ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.

Related posts

Leave a Reply