Header Ads
Breaking News

ಉಡುಪಿ: ಸಮೂಹ ಸಾರಿಗೆಯಲ್ಲಿ ಪ್ರಯಾಣಿಸಿ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ

ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಮತ್ತು ಇತರ ಸಿಬ್ಬಂದಿ ಸಾರ್ವಜನಿಕ ಸಾರಿಗೆ ಕಲ್ಪನೆಯಲ್ಲಿ ಪ್ರಯಾಣಿಸಿ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದರು. ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ನಿರ್ದೇಶನದಲ್ಲಿ ಎಲ್ಲರೂ ವಾರ್ತಾ ಇಲಾಖೆಯ ವಾಹನದಲ್ಲಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಛೇರಿಗೆ ತೆರಳಿದರು. ಮುಂಜಾನೆ ಜಿಲ್ಲಾಧಿಕಾರಿ ನಿವಾಸದಿಂದ ಹೆಪ್ಸಿಬಾರಾಣಿ ಕೊರ್ಲಪಾಟಿ ವಾಹನ ಚಾಲಕ ಮತ್ತು ಅಂಗರಕ್ಷಕರು ವಾಹನ ಏರಿದರು. ಜೊತೆಗೆ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಜಿಲ್ಲಾಧಿಕಾರಿಗಳಿಗೆ ನೀಡಿದರು. ವಿವಿಧ ಅಧಿಕಾರಿಗಳು ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಏರಿದರು. ಡಿಸಿ ನಿವಾಸದಿಂದ ಹೊರಟ ವಾಹನ ಬನ್ನಂಜೆಯ ತಾಲೂಕು ಕಚೇರಿ ಮಾರ್ಗವಾಗಿ ಸಿಟಿ ಬಸ್ ನಿಲ್ದಾಣ ಎಂಜಿಎಂ ಕಾಲೇಜು ಮಾರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಲು ಕಾಯುತ್ತಿದ್ದ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಹತ್ತಿಸಿಕೊಂಡು ಕಚೇರಿ ತಲುಪಿತು. ಸಂಜೆ ಕಚೇರಿ ಮುಕ್ತಾಯದ ಅನಂತರವೂ ಸಾರ್ವಜನಿಕ ವಾಹನದಲ್ಲಿ ಎಲ್ಲರೂ ಮರಳಿದರು.

Related posts

Leave a Reply

Your email address will not be published. Required fields are marked *