Header Ads
Breaking News

ಸಮ್ಮಿಶ್ರ ಸರ್ಕಾರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ : ಶಾಸಕ ಕುಮಾರ ಬಂಗಾರಪ್ಪ ಹೇಳಿಕೆ

ಬೈಂದೂರು : ದೇಶವನ್ನು ಅಭಿವೃದ್ಧಿಯತ್ತ ತೆಗೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ಸಮಿಶ್ರ ಸರ್ಕಾರಗಳು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಹಾಗಾಗಿ ದೇಶದಲ್ಲಿ ಸುಭದ್ರವಾದ ಒಂದು ಪಕ್ಷದ ಸರಕಾರ ರಾಜ್ಯ ಹಾಗೂ ದೇಶದಲ್ಲಿ ಬರಬೇಕಿದೆ ಎಂದು ಸೊರಬ ಶಾಸಕ ಕುಮಾರ ಬಂಗಾರಪ್ಪ ಹೇಳಿದರು.

ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ಚುನಾವಣೆ ಮುಂದಿನ ಐದು ವರ್ಷಕ್ಕಷ್ಟೇ ಅಲ್ಲ. ಬದಲಿಗೆ ಮುಂದಿನ ತಲೆಮಾರಿಗೆ ಎಂದು ಭಾವಿಸಬೇಕಿದೆ. ಎರಡು ತಲೆಮಾರುಗಳ ಮಾಡಿಕೊಂಡಿರುವ ನಷ್ಟವನ್ನು ತುಂಬಿಕೊಡಬೇಕಿದ್ದರೆ ಮತ್ತೆ ಬಿಜೆಪಿ ಪಕ್ಷವನ್ನೇ ಬೆಂಬಲಿಸಬೇದೆ.

ಸುದ್ದಿಗೋಷ್ಠಿಯಲ್ಲಿ ಬೈಂದೂರು ಬಿಜೆಪಿ ಮಂಡಲದ ಆಧ್ಯಕ್ಷ ಸದಾನಂದ ಉಪ್ಪಿನಕುದ್ರು, ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಪ್ರಿಯಾದರ್ಶಿನಿ ಬೆಸ್ಕೂರು, ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ, ಮಂಡಲದ ಪ್ರಧಾನ ಕಾರ್ಯದರ್ಶಿ ಬಾಲಚಂದ್ರ ಭಟ್ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *