
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ (ರಿ) ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ವತಿಯಿಂದ ಸರಕಾರಿ ನೌಕರರು ಹಾಗೂ ಶಿಕ್ಷಕರೊಂದಿಗೆ ನೇರ ಸಂವಾದ ಚರ್ಚೆ ಕಾರ್ಯಕ್ರಮವು ಡಿಸೆಂಬರ್ 3ರಂದು ಮಂಗಳೂರಿನ ನಂದಿನಿ ಸಭಾಂಗಣದಲ್ಲಿ ನಡೆಯಲಿದೆ.
ಈ ಬಗ್ಗೆ ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯ ಸರ್ಕಾರ ನೌಕರರ ಜಿಲಾಧ್ಯಕ್ಷ ಪಿ.ಕೆ. ಕೃಷ್ಣ ಅವರು, ಸಂವಾದ ಮತ್ತು ಚರ್ಚೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಕ್ರೀಯಾಶೀಲ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿಯವರು ಜಿಲ್ಲೆಗೆ ಪ್ರಪ್ರಥಮ ಬಾರಿಗೆ ಭೇಟಿ ನೀಡಿ ನೇರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್ ಎಂ.ಎಸ್. ರಾಜ್ಯ ಪರಿಷತ್ ಸದಸ್ಯರಾದ ಶೆರ್ಲಿ ಸುಮಾಲಿನಿ, ಖಜಾಂಚಿ ಅಕ್ಷಯ್ ಭಂಡಾರ್ಕಾರ್ ಉಪಸ್ಥಿತರಿದ್ದರು.