Header Ads
Header Ads
Breaking News

ಸರಕಾರಿ ಶಾಲೆಗಳ ಉಳಿವಿಗೆ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹ.

ಬಂಟ್ವಾಳ: ಸರಕಾರಿ ಶಾಲೆಗಳ ಉಳಿವಿಗಾಗಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ ೮ ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಿಂದ ವಿಧಾನಸೌಧಕ್ಕೆ ಹಮ್ಮಿಕೊಂಡಿರುವ ಕಾಲ್ನಡಿಗೆ ಜಾಥಕ್ಕೆ ಪೂರ್ವಬಾವಿಯಾಗಿ ದುರ್ಗಾ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕಿನ ಹಿಂದೂ ಶಕ್ತಿ ಆಲಡ್ಕ ಹಾಗೂ ರಾಜಕೇಸರಿ ಸಂಘಟನೆಗಳ ಸಹಯೋಗದೊಂದಿಗೆ ಬೃಹತ್ ವಾಹನ ಜಾಥ ನಡೆಯಿತು.ಕರೆಂಕಿ ಶ್ರೀ ದುರ್ಗಾಪರಮೆಶ್ವರೀ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪುಂಜಾಲಕಟ್ಟೆ ಗೋಪಾಲಕೃಷ್ಣ ದೇವಸ್ಥಾನದ ಬಳಿ ಆರಂಭಗೊಂಡ ವಾಹನ ಜಾಥಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರ ಧ್ವಜಾ ಹಸ್ತಾಂತರಿಸುವ ಮೂಲಕ ಚಾಲನೆ ನೀಡಿದರು. ಪುಂಜಾಲಕಟ್ಟೆ, ಮಡಂತ್ಯಾರು, ಗುರುವಾಯನಕೆರೆ ಮೂಲಕ ರಾಜರಸ್ತೆಯಲ್ಲಿ ಸಾಗಿದ ವಾಹನ ಜಾಥ ಬೆಳ್ತಂಗಡಿ ಬಸ್ಸು ನಿಲ್ದಾಣದ ಬಳಿ ಸಮಾಪನ ಗೊಂಡಿತು. 

ಕಾರ್ಯಕ್ರಮವನ್ನು ಉದ್ದೇಶಿಸಿ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಮಾತನಾಡಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ದೊರೆಯುವಂತೆ ಎಲಾ ಸೌಲಭ್ಯಗಳು ಸರಕಾರಿ ಶಾಲೆಗಳಲ್ಲೂ ಸಿಗಬೇಕು, ಹಳೆಯ ಶಿಕ್ಷಣ ಪದ್ದತಿಯನ್ನು ಬಿಟ್ಟು ಹೊಸ ಶಿಕ್ಷಣ ನೀತಿಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನಲ್ಲಿ ಕಾಲ್ನಡಿಗೆ ಜಾಥ ನಡೆಯಲಿದೆ ಎಂದರು. ಶಾಸಕ ಹರೀಶ್ ಪೂಂಜಾ ಮಾತನಾಡಿ ಸರಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದ್ದು ಉಳಿಸಲು ಹೋರಾಟ ನಡೆಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ರಾಜ್ಯಕ್ಕೆ ಮಾದರಿಯಾಗಿರುವ ದಡ್ಡಲಕಾಡು ಶಾಲೆಯ ಪ್ರೇರಣೆ ಪಡೆದು ಬೆಳ್ತಂಗಡಿ ತಾಲೂಕಿನಲ್ಲೂ ಮೂರು ಶಾಲೆಗಳನ್ನು ಉನ್ನತೀಕರಿಸುವ ಚಿಂತನೆ ನನಗಿದೆ. ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಬಡವರ ಪರ ಹೋರಾಟಕ್ಕ ಸಂಪೂರ್ಣ ಬೆಂಬಲವಿದೆ ಎಂದರು. ಪತ್ರಕರ್ತ ಅಕ್ಬರ್ ಅಲಿ, ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ದುರ್ಗಾ ಫ್ರೆಂಡ್ಸ್ ಕ್ಲಬ್‌ನ ಸದಸ್ಯರಾದ ರಾಮಚಂದ್ರ ಕರೆಂಕಿ, ಪುರುಷೋತ್ತಮ ಅಂಚನ್, ಪೂವಪ್ಪ ಮೆಂಡನ್, ನವೀನ್ ಸೇಸಗುರಿ, ಹಿಂದೂಶಕ್ತಿಯ ರಮೇಶ್ ಹೆಗ್ಡೆ, ದೇವದಾಸ್, ಸಂತೋಷ್, ರಾಜಕೇಸರಿಯ ದೀಪಕ್, ಲೋಕೇಶ್ ಮತ್ತಿತರರು ಹಾಜರಿದ್ದರು.

Related posts

Leave a Reply