Header Ads
Header Ads
Breaking News

ಸರಕಾರಿ ಶಾಲೆ ಉಳಿಸಿ ಅಭಿಯಾನ. ರಾಜ್ಯಾದ್ಯಂತ ಸಂಚರಿಸಲಿರುವ ರಥಯಾತ್ರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್‌ರಿಂದ ಚಾಲನೆ. ರಾಯಿ, ಸಿದ್ದಕಟ್ಟೆಯ ಮೂಲಕ ಮೂಡುಬಿದಿರೆಗೆ ರಥಯಾತ್ರೆ.

 

ಬಂಟ್ವಾಳ: ಸರಕಾರಿ ಶಾಲೆ ಉಳಿಸಿ ಅಭಿಯಾನದ ಅಂಗವಾಗಿ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ರಾಜ್ಯದ್ಯಂತ ಸಂಚರಿಸಲಿರುವ ರಥಯಾತ್ರೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಬಂಟ್ವಾಳ ಬಡ್ಡಕಟ್ಟೆಯ ಹನುಮಾನ್ ದೇವಸ್ಥಾನದ ಬಳಿ ಚಾಲನೆ ನೀಡಿದರು.ಕರೆಂಕಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಆರಂಭಗೊಂಡ ರಥಯಾತ್ರೆಗೆ ಬಡ್ಡಕಟ್ಟೆಯಲ್ಲಿ ಸಾರ್ವಜನಿಕರು ಹಾಗೂ ಶಿಕ್ಷಣ ಪ್ರೇಮಿಗಳು ಸಾಥ್ ನೀಡಿ ಬಂಟ್ವಾಳ ಪೇಟೆ ಮೂಲಕ ಬೈಪಾಸ್ ವರೆಗೆ ಕಾಲ್ನಡಿಗೆ ಮೂಲಕ ಆಗಮಿಸಿ ಬೀಳ್ಕೊಟ್ಟರು. ಈ ಸಂದರ್ಭ ಶಾಸಕ ರಾಜೇಶ್ ನಾಯಕ್ ಅವರು ಮಾತನಾಡಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ದಡ್ಡಲಕಾಡು ಸರಕಾರಿ ಶಾಲೆಯನ್ನು ರಾಜ್ಯದಲ್ಲೇ ಮಾದರಿ ಶಾಲೆಯನ್ನಾಗಿ ರೂಪಿಸಿದೆ.

ಇಂತಹ ಮಾದರಿ ಶಾಲೆ ರಾಜ್ಯದ ಎಲ್ಲಾ ಗ್ರಾಮಗಳಲ್ಲೂ ನಿರ್ಮಾಣವಾಗ ಬೇಕು. ಈ ಬಗ್ಗೆ ವಿಧಾನಸೌಧದಲ್ಲೂ ಈ ಬಗ್ಗೆ ಧ್ವನಿ ಎತ್ತುವುದಾಗಿ ಅವರು ತಿಳಿಸಿದರು.ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ್, ಜಿ.ಆನಂದ, ದಿನೇಶ್ ಭಂಡಾರಿ, ದೇವದಾಸ ಶೆಟ್ಟಿ, ಸೀತರಾಮ ಪೂಜಾರಿ, ನಾಗೇಶ್ ಸಾಲ್ಯಾನ್, ಪದ್ಮನಾಭ ಪೂಜಾರಿ ಕೇಲ್ದೋಡಿ, ಆನಂದ ಕೋಟ್ಯಾನ್, ಲಕ್ಷ್ಮೀನಾರಾಯಣ ಗೌಡ, ದಿನೇಶ್ ರಾಯಿ, ರಮನಾಥ ಪೈ, ಮೀನಕ್ಷಿ ಗೌಡ, ಸೀತರಾಮ ಕೆ. ರಾಮಚಂದ್ರ ಪೂಜಾರಿ, ಪೂವಪ್ಪ ಮೆಂಡನ್, ಧರ್ಣಪ್ಪ ಪೂಜಾರಿ, ಪುರುಷೋತ್ತಮ ಅಂಚನ್, ಶೇಖರ್ ಅಂಚನ್ ಮತ್ತಿತರರು ಹಾಜರಿದ್ದರು. ಬಳಿಕ ರಾಯಿ, ಸಿದ್ದಕಟ್ಟೆಯ ಮೂಲಕ ರಥಯಾತ್ರೆ ಮೂಡಬಿದಿರೆ ತಲುಪಿತು

Related posts

Leave a Reply