Header Ads
Header Ads
Breaking News

ಸರ್ಕಾರಿ ಬಸ್ ಟಿಪ್ಪರ್ ಲಾರಿಗೆ ಢಿಕ್ಕಿ : ಬಸ್ ಚಾಲಕನಿಗೆ ಗಂಭೀರ ಗಾಯ

ಸರ್ಕಾರಿ ಬಸ್ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಗಂಭೀರ ಗಾಯಗೊಂಡಿದ್ದು, ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ವಿಟ್ಲದ ಕಂಬಳಬೆಟ್ಟು ಎಂಬಲ್ಲಿ ಸಂಭವಿಸಿದೆ.


ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನ ಚಾಲಕ ಚಲಿಸುತ್ತಿದ್ದ ವೇಳೆ ಏರ್ ತೆಗೆಯಲು ಮುಂದಾಗುತ್ತಿದ್ದಂತೆ ವಿಟ್ಲ ಕಡೆಗೆ ತೆರಳುತ್ತಿದ್ದ ಟಿಪ್ಪರ್‌ಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದು, ಬಸ್ಸಿನಲ್ಲಿದ್ದ ಇತರ ಪ್ರಯಾಣಿಕರು ಸಾಧಾರಣ ಗಾಯಗೊಂಡಿದ್ದು, ಅವರನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿದ್ದಾರೆ.

Related posts

Leave a Reply

Your email address will not be published. Required fields are marked *