Header Ads
Header Ads
Breaking News

ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ: ತೊಕ್ಕೊಟ್ಟುವಿನಲ್ಲಿ ಬಿಜೆಪಿ ವತಿಯಿಂದ ಏಕತಾ ಓಟ

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನದ ಅಂಗವಾಗಿ ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಏಕತಾ ಓಟವು ತೊಕ್ಕೊಟ್ಟು ಬಸ್ ನಿಲ್ದಾಣದಿಂದ ಉಳ್ಳಾಲದ ವೀರರಾಣಿ ಅಬ್ಬಕ್ಕ ಸರ್ಕಲ್‍ವರೆಗೆ ನಡೆಯಿತು.ಹಿರಿಯ ಮುಖಂಡರಾದ ರಾಜಾರಾಮ ಭಟ್ ಅವರು ಮಂಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಬೋಳಿಯಾರ್ ಅವರಿಗೆ ದ್ವಜವನ್ನು ಹಸ್ತಾಂತರಿಸುವ ಮೂಲಕ ಏಕತಾ ಓಟಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ರಾಜಾರಾಮ ಭಟ್ ಅವರು, ಸರ್ದಾರ್ ವಲ್ಲಭಬಾಯಿ ಪಟೇಲ್ ಅವರು ದೇಶ ಕಂಡ ಅಪ್ರತಿಮ ನಾಯಕರಾಗಿದ್ದಾರೆ.

ಅಂದಿನ ಕಾಲದಲ್ಲಿ ರಾಷ್ಟ್ರದೆಲ್ಲೆಡೆ ಹರಡಿಕೊಂಡಿದ್ದಕೋಮುದ್ವೇಷವನ್ನುನಿಯಂತ್ರಣಗೊಳಿಸಿದಲ್ಲದೆ, ಸುಮಾರು 200 ಹೆಚ್ಚು ಸ್ಥಳಿಯಾಡಳಿತವನ್ನು ಒಟ್ಟುಗೂಡಿಸಿ ಏಕತೆಯನ್ನು ಮೂಡಿಸಿದ ನಾಯಕರಾಗಿದ್ದಾರೆ ಎಂದು ಹೇಳಿದರು.ಮಾಜಿ ಶಾಸಕ ಜಯರಾಮ ಶೆಟ್ಟಿ ಮಾತನಾಡಿ, ಕಾಶ್ಮೀರವನ್ನು ಭಾರತಕ್ಕೆ ಸೇರ್ಪಡೆಗೊಳಿಸುವಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪಾತ್ರ ಮಹತ್ವಪೂರ್ಣವಾದುದು. ಪ್ರಧಾನಿ ನರೇಂದ್ರ ಮೋದಿಯವರು ಪಟೇಲ್ ಅವರ ಹೆಸರನ್ನು ಶಾಶ್ವತವಾಗಿ ಉಳಿಸುವಂತಹ ಕಾರ್ಯವನ್ನು ಮಾಡುತ್ತಿದ್ದಾರೆ ಎಂದರು. (ಬೈಟ್)ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್, ಸೀತಾರಾಂ ಬಂಗೇರ, ಮೋಹನ್ ರಾಜ್, ಮನೋಜ್ ಆಚಾರ್ಯ, ಜೀವನ್ ತೊಕ್ಕೊಟ್ಟು, ಚಂದ್ರಹಾಸ್ ಅಡ್ಯಂತಾಯ, ನವೀನ್ ಪಾದಲ್ಪಾಡಿ, ಧನಲಕ್ಷ್ಮೀ ಗಟ್ಟಿ, ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply