Header Ads
Header Ads
Breaking News

ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರಕುಮಾರ್ ಕೆ.ರವಿರಾಜ್ ಹೆಗ್ಡೆ ಅವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಬಂಧುಗಳ ವತಿಯಿಂದ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲ ಬೆಂಗಳೂರು ಇದರ ನೂತನ ಅದ್ಯಕ್ಧ ರಾಗಿ ಆಯ್ಕೆಯಾದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ರಾಷ್ಟ್ರೀಯ ಡೈರಿ ಎಕ್ಸಲೆನ್ಸಿ ಪ್ರಶಸ್ತಿ ಪುರಸ್ಕೃತ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಇದರ ಅದ್ಯಕ್ಷರಾಗಿರುವ ಕೆ.ರವಿರಾಜ್ ಹೆಗ್ಡೆ ಅವನ್ನು ಅಭಿನಂದಿಸುವ ಕಾರ್ಯಕ್ರಮ ನ.11 ರಂದು ಉಡುಪಿಯ ಅಮ್ಮಣ್ಣಿರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.

ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಅತಿಥಿ ಅಭ್ಯಾಗತರನ್ನು ಅಜ್ಜರಕಾಡಿನ ಪುರಭವನದಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾ ಭವನದವರೆಗೆ ಮೆರವಣಿಗೆಯ ಮೂಲಕ ಸ್ವಾಗತಿಸಲಾಗುವುದು. ಟ್ಯಾಬ್ಲೋಗಳು, ಚಂಡೆವಾದನ ಸಾಥ್ ನಿಡಲಿವೆ. ಸುಮಾರು 10 ಸಾವಿರ ಸಹಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿ ಕಾರ್ಯಕ್ರಮದ ಸಂಪೂರ್ಣ ಮಾಹಿತಿಯನ್ನು ನೀಡಿದರು.

ವರದಿ:ಪಲ್ಲವಿ ಸಂತೋಷ್, ಉಡುಪಿ