
ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆಂಡ್ ಮ್ಯಾನೇಜ್ಮೆಂಟ್ನಲ್ಲಿ ಸಯನ್ಸ್ ಟೆಕ್ನಾಲಜಿ-ಮ್ಯಾನೇಜ್ಮೆಂಟ್ ಕುರಿತ ಸಹ್ಯಾದ್ರಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
ಅಡ್ಯಾರು ಸಹ್ಯಾದ್ರಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಸಮಾವೇಶವನ್ನು ಮಂಗಳೂರು ರಾಮಕೃಷ್ಣ ಮಠದ ಜಿತಕಾಮಾನಂದಜಿ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಮಾತನಾಡಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಡೀ ವಿಶ್ವವನ್ನೇ ಬದಲಾಯಿಸಿದೆ. ಮಾನವ ಜೀವನ ಮತ್ತಷ್ಟು ಸುಲಭವಾಗಿದೆ. ಮನುಷ್ಯರಿಗೆ ವಿವಿಧ ಸ್ತರಗಳಲ್ಲಿ ಇದು ನೆರವಿಗೆ ಬಂದಿದೆ ಎಂದು ಹೇಳಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಂ.ಆರ್. ಸೀತರಾಮ್ ಮಾತನಾಡಿ, ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಕಡೆಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಸರ್ಕಾರ ಸಂಚಾರ ತಾರಾಲಯ ಯೋಜನೆ ಹಮ್ಮಿಕೊಂಡು ಕಾರ್ಯ ತತ್ಪರವಾಗಿದೆ. ಎಲ್ಲಾ ಸರ್ಕಾರಿ ಪ್ರೌಢ ಶಾಲೆಗಳಿಗೆ ಈ ಸಂಚಾರ ತಾರಾಲಯ ಭೇಟಿ ನೀಡಲಿದೆ. ರಾಜ್ಯ ಸರ್ಕಾರ ವಿಜ್ಞಾನ ಮತ್ತು ಸಂತ್ರಜ್ಞಾನಕ್ಕೆ ಮಹತ್ವದ ಕೊಡುಗೆಯನ್ನು ನೀಡಿದೆ ಎಂದರು.
ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ, ಮಂಜುನಾಥ ಭಂಡಾರಿ ಸಮ್ಮೇಳನದ ಉದ್ದೇಶ ವಿವರಿಸಿದರು.
ಈ ಸಂದರ್ಭ ನೋಬೆಲ್ ಪ್ರಶಸ್ತಿ ವಿಜೇತ ಭೌತ ವಿಜ್ಞಾನಿ ಸರ್ಜ್ ಹೊರಾಕೆ, ರಸಾಯನ ಶಾಸ್ತ್ರದಲ್ಲಿ ನೋಬೆಲ್ ಪ್ರಶಸ್ತಿ ಪಡೆದ ಅಡಾ ಈ ಎನೋಥ್, ಸಹ್ಯಾದ್ರಿ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ನಿರ್ದೇಶಕ ಡಾ. ಡಿ.ಎಲ್. ಪ್ರಭಾಕರ ಮತ್ತಿತ್ತರರು ಉಪಸ್ಥಿತರಿದ್ದರು.