Header Ads
Header Ads
Breaking News

ಸಹ್ಯಾದ್ರಿ ಕಾಲೇಜಿನ ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮಂಗಳೂರಿನ ಹೊರವಲಯದ ಅಡ್ಯಾರ್‌ನಲ್ಲಿರುವ ಸಹ್ಯಾದ್ರಿ ಕಾಲೇಜಿನಲ್ಲಿ ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಕಾಲೇಜಿನ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಫೈನಾನ್ಸಿಯಲ್ ಅಕೌಂಟಿಂಗ್ ಅಡ್ವೈಸರಿ ಸರ್ವಿಸ್ ಇ.ವೈ ಇಂಡಿಯಾದ ಸಹ ಪಾಲುದಾರ ಡಾಕ್ಟರ್ ದೇವೇಶ್ ಪ್ರಕಾಶ್ ಮಾತನಾಡಿ, ಕಲಿಕೆಗೆ ಯಾವುದೇ ರೀತಿಯ ಮುಕ್ತಾಯ ಎಂಬುದಿಲ್ಲ ವಿದ್ಯಾರ್ಥಿಗಳಾದ ನೀವು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ದೇಶಕ್ಕೆ ಏನಾದರೂ ಕೊಡುಗೆ ನೀಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
   
ನಂತರ ಮಾತನಾಡಿದ ಸೀನಿಯರ್ ಮ್ಯಾನೇಜರ್ ಮಿಸ್ಟರ್ ಚೇತಕ್ ಲೋಡಯ್ಯ ಜೀವನದಲ್ಲಿ ಏನಾದರೂ ಸಾಧನೆ ಮಾಡಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಇತರರೊಡನೆ ಉತ್ತಮ ಸಂಬಂಧ ಬೆಳೆಸಿಕೊಳ್ಳಿ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ವಿದ್ಯಾರ್ಥಿಗಳಿಗೆ ಹಾರೈಸಿದರು. ರಾಷ್ಟ್ರಗೀತೆಯೊಂದಿಗೆ ಸಭಾ ಕಾರ್ಯಕ್ರಮಕ್ಕೆ ನಾಂದಿ ಹಾಡಿ ನಂತರ ಫೋಟೊ ಸೆಷನ್ ನಡೆಯಿತು. ಕಾರ್ಯಕ್ರಮದಲ್ಲಿ ಭಂಡಾರಿ ಫೌಂಡೇಷನ್ ಅಧ್ಯಕ್ಷ ಮಿಸ್ಟರ್ ಮಂಜುನಾಥ್ ಭಂಡಾರಿ ಎಂಬಿಎ ವಿಭಾಗದ ನಿರ್ದೇಶಕ ಡಾಕ್ಟರ್ ವಿಶಾಲ್ ಸಮರ್ಥ ಸ್ಟ್ಯಾಟಿಜಿಕ್ ಪ್ಲಾನಿಂಗ್ ವಿಭಾಗದ ನಿರ್ದೇಶಕ ಡಾಕ್ಟರ್ ಯು ಎಂ ಭುಶಿ ಮತ್ತಿತರರು ಉಪಸ್ಥಿತರಿದ್ದರು

Related posts

Leave a Reply