Header Ads
Header Ads
Breaking News

ಸಹ್ಯಾದ್ರಿ ಸೈನ್ಸ್ ಟ್ಯಾಲೆಂಟ್ ಹಂಟ್ 2017 ಸಹ್ಯಾದ್ರಿ ಆವರಣದಲ್ಲಿ ಪ್ರತಿಭಾನ್ವೇಷಣಾ ಸ್ಪರ್ಧೆ ಪ್ರೊ. ಎಸ್.ಎನ್. ಓಂಕಾರ್‌ರಿಂದ ಉದ್ಘಾಟನೆ

ಮಂಗಳೂರಿನ ಅಡ್ಯಾರಿನಲ್ಲಿರುವ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ವತಿಯಿಂದ ಪಿಯುಸಿ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗಾಗಿ ಸಹ್ಯಾದ್ರಿ ಟ್ಯಾಲೆಂಟ್ ಹಂಟ್ ಹಮ್ಮಿಕೊಂಡಿದ್ದು ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವನ್ನು ಬೆಂಗಳೂರಿನ ಇಂಡಿಯನ್ ಇನ್ಸ್‌ಸ್ಟಿಟ್ಯೂಟ್ ಆಫ್ ಸಯನ್ಸ್‌ನ ಮುಖ್ಯ ಸಂಶೋಧನಾ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರೊಪೆಸರ್ ಎಸ್.ಎನ್. ಓಂಕಾರ್ ಟ್ಯಾಲೆಂಟ್ ಹಂಟ್‌ನ್ನು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು. ಅನಂತರ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಅವರು, ವಿದ್ಯಾರ್ಥಿಗಳ ಪ್ರತಿಭೆಗೆ ಪೂರಕವಾದಂತ ಕಾರ್ಯಕ್ರಮ ಇದಾಗಿದೆ. ಪ್ರತಿಯೊಬ್ಬರು ಕೂಡ ಇಂತಹ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪ್ರಾಜೆಕ್ಟ್ ಎಕ್ಸ್‌ಬಿಷನ್ ನಡೆಯಿತು.

ಕಾರ್ಯಕ್ರಮದಲ್ಲಿ ಸಚಿವ ಸಂತೋಷ್ ಎಸ್. ಲಾಡ್, ಸುರತ್ಕಲ್ ಎನ್‌ಐಟಿಕೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪೊಪೆಸರ್ ವಿಜಯ್ ಹೆಚ್. ದೇಸಾಯಿ, ಪ್ಯೂಚರ್ ಪೋಕಸ್ ಇನ್ಪೋಟೆಕ್ ಪ್ರೈವೆಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಎಂ.ವಿ. ಸುಬ್ರಹ್ಮಣ್ಯನ್, ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಮಂಜುನಾಥ್ ಭಂಡಾರಿ, ಪ್ರಿನ್ಸಿಪಾಲ್ ಡಾ. ಯು.ಎಮ್. ಬೂಶಿ ಉಪಸ್ಥಿತರಿದ್ದರು.

ವರದಿ: ನಾಗರಾಜ್ ಮಂಗಳೂರು