Header Ads
Header Ads
Breaking News

ಸಾಮೂಹಿಕ ವರಮಹಾಲಕ್ಷ್ಮೀ ವೃತಾಚರಣೆ. ಬಿಲ್ಲವ ಸಮಾಜ ಸೇವಾ ಸಂಘದಿಂದ ಆಯೋಜನೆ. ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿ ಧಾರ್ಮಿಕ ಕಾರ್ಯಕ್ರಮ.

ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಬಿಲ್ಲವ ಮಹಿಳಾ ಸೇವಾ ಸಂಘದ ಆಶ್ರಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ವೃತಾಚರಣೆ ಬಿ.ಸಿ.ರೋಡಿನ ಗಾಣದಪಡ್ಪುವಿನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಸಡಗರದಿಂದ ನಡೆಯಿತು.ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ವಿಶೇಷ ಪೂಜೆ ನೆರವೇರಿದ ಬಳಿಕ ಲೋಕೇಶ್ ಶಾಂತಿ ಅವರ ಪೌರೋಹಿತ್ಯದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಧಾರ್ಮಿಕ ವಿಧಿ ವಿಧಾನಗಳು ನಡೆದವು.

ಮಹಿಳೆಯರು ಅಪಾರ ಸಂಖ್ಯೆಯಲ್ಲಿ ವೃತಾಚರಣೆಯಲ್ಲಿ ಪಾಲ್ಗೊಂಡು ಕೃತಾರ್ಥರಾದರು. ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಪ್ರಮುಖರಾದ ಬೇಬಿ ಕುಂದರ್, ಹರಿಕೃಷ್ಣ ಬಂಟ್ವಾಳ್, ಭುವನೇಶ್ ಪಚ್ಚಿನಡ್ಕ, ವಿಶ್ವನಾಥ ಬಿ, ಗಣೇಶ್ ಸುವರ್ಣ ಮೊದಲಾದವರು ಪಾಲ್ಗೊಂಡಿದ್ದರು. ಮಹಾಪೂಜೆಯ ನಡೆದು ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು. ಬಳಿಕ ಅನ್ನಸಂತರ್ಪಣೆ ನಡೆಯಿತು.

Related posts

Leave a Reply