Header Ads
Breaking News

ಸಾರಿಗೆ ನೌಕರರ ಬಂದ್ ಉಡುಪಿಯಲ್ಲಿ ನೀರಸ

ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರಿಗೆ ಸಂಸ್ಥೆ ನೌಕರರ ಪ್ರತಿಭಟನೆಗೆ ಉಡುಪಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಕೃಷ್ಣನ ನಗರಿ ಉಡುಪಿಯಲ್ಲಿ ಎಂದಿನಂತೆ ಬಸ್ ಸಂಚರಿಸಿದ್ದು ಎಲ್ಲೂ ಪ್ರಯಾಣಿಕರಿಗೆ ತೊಂದರೆಯಾಗಿಲ್ಲ. ಎಂದಿನಂತೆ ಬೆಳಗ್ಗೆಯಿಂದಲೇ ಬಸ್ಸುಗಳು ನಿಲ್ಧಾಣಕ್ಕೆ ಆಗಮಿಸಿ ತಮ್ಮ ದೈನಂದಿನ ಕಾರ್ಯ ನಿರ್ವಹಿಸಿದವು. ಬಂದ್ ನಿಂದ ಯಾವುದೇ ಸಮಸ್ಯೆ ಎದುರಾಗಿಲ್ಲ. ಸಾರಿಗೆ ಸಂಸ್ಥೆಯ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ರಾಜ್ಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆ ಕರೆ ನೀಡಿದ್ದವು. .ಇನ್ನು ಕರ್ತವ್ಯಕ್ಕೆ ಗೈರಾದರೆ ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿರುವ ಹಿನ್ನಲೆಯಲ್ಲಿ, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿ, ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Related posts

Leave a Reply

Your email address will not be published. Required fields are marked *