Header Ads
Breaking News

ಸಾರಿಗೆ ನೌಕರರ ಮುಷ್ಕರ : ಮಂಗಳೂರಿನಲ್ಲಿ ರಸ್ತೆಗಿಳಿಯದ ಸರ್ಕಾರಿ ಬಸ್‍ಗಳು

ವೇತನ ಪರಿಷ್ಕರಣೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಸಾರ್ಟಿಸಿ ನೌಕರರು ಇಂದಿನಿಂದ ಆರಂಭಿಸಿರುವ ಮುಷ್ಕರಕ್ಕೆ ದ.ಕ. ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನೌಕರರು ಕರ್ತವ್ಯಕ್ಕೆ ಹಾಜರಾಗದ ಕಾರಣ ಬಸ್ ಗಳು ಡಿಪೊದಲ್ಲೇ ಉಳಿದುಕೊಂಡಿವೆ. ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ 470ಕ್ಕೂ ಅಧಿಕ ಬಸ್ ಗಳು ಬುಧವಾರ ನಿಲ್ದಾಣದಲ್ಲಿಯೇ ತಂಗಿವೆ. ಈ ನಡುವೆ ಸರಕಾರಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಪ್ರಯಾಣ ಬೆಳೆಸುತ್ತಿರುವುದು ಕಂಡುಬರುತ್ತಿದೆ.
ಬಸ್ ಮುಷ್ಕರದ ಬಗ್ಗೆ ಮಾಹಿತಿ ಇದ್ದ ಕಾರಣದಿಂದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಪ್ರಯಾಣಿಕರ ಸಂಖ್ಯೆ ವಿರಳವಾಗಿ ಕಂಡುಬರುತ್ತಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Related posts

Leave a Reply

Your email address will not be published. Required fields are marked *