Header Ads
Header Ads
Breaking News

ಸಾರ್ವಜನಿಕ ಅಹವಾಲು ಸ್ವೀಕರಿಸಿದ ಶಾಸಕ “ಡಾ. ವೈ ಭರತ್ ಶೆಟ್ಟಿ”

ಎಲ್ಲಾ ವರ್ಗಗಳ ಜನರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗುವುದು ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ ವೈ ಭರತ್ ಶೆಟ್ಟಿ ಹೇಳಿದರು.ಅವರು ಮಂಗಳೂರಿನ ಸರ್ಕಿಟ್ ಹೌಸ್‌ನಲ್ಲಿ ಸಾರ್ವಜನಿಕರ ಅವಹಾಲು ಸ್ವೀಕರಿಸಿದ ಬಳಿಕ ಮಾತನಾಡಿ, ಈಗಾಗಲೇ ಹಲವಾರು ಮಂದಿಯ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಿದ್ದೇನೆ. ಚುನಾವಣಾ ನೀತಿ ಸಂಹಿತೆಯ ಹಿನ್ನಲೆಯಿಂದಾಗಿ ಕೆಲವೊಂದು ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ, ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಳ್ಳಬೆಕಾಗುತ್ತದೆ. ಮುಂದಿನ ದಿನಗಳಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡಿ ಸೂಕ್ತ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

 

Related posts

Leave a Reply