Header Ads
Header Ads
Breaking News

ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ . ಧರ್ಮ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಂಡಾಗ ಶ್ರೇಯಸ್ಸು. ವಿವೇಕಾನಂದ ಕಾಲೇಜಿನ ಉಪನ್ಯಾಸಕಿ ಡಾ| ವಿಜಯಾ ಸರಸ್ವತಿ.

ಧರ್ಮ ಎನ್ನುವುದು ಬದುಕಿನ ಭಾಗವಾಗಿದ್ದು, ಅದಕ್ಕೆ ವಿರುದ್ಧವಾಗಿ ಹೋದಾಗ ಅಧರ್ಮವಾಗುತ್ತದೆ. ಧರ್ಮ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಂಡಾಗ ಶ್ರೇಯಸ್ಸು ಲಭಿಸುತ್ತದೆ ಎಂದು ವಿವೇಕಾನಂದ ಕಾಲೇಜಿನ ಉಪನ್ಯಾಸಕಿ ಡಾ| ವಿಜಯಾ ಸರಸ್ವತಿ ಹೇಳಿದರು.ಅವರು ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಪುತ್ತೂರು ಘಟಕದ ಆಶ್ರಯದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಶುಕ್ರವಾರ ನಡೆದ 10 ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಸಭಾ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ಮಾತನಾಡಿ, ಸಂಸ್ಕೃತಿ, ಸಂಸ್ಕಾರ ಬೆಳೆಸುವ ನಿಟ್ಟಿನಲ್ಲಿ ಧಾರ್ಮಿಕ ಆಚರಣೆ ಅಗತ್ಯ. ಶಕ್ತಿ, ಭಕ್ತಿ, ಸಂಸ್ಕೃತಿಯ ಬದುಕಿನಿಂದ ಶ್ರೇಯಸ್ಸು ಹೆಚ್ಚುತ್ತದೆ.ಇಷ್ಟಾರ್ಥ ಈಡೇರಿಸುವ ದೇವಿಯ ದಿನವಾಗಿರುವುದರಿಂದ ಪ್ರಕೃತಿಯ ರಕ್ಷಣೆಗಾಗಿ, ಆಮೂಲಕ ಆರೋಗ್ಯುತ ಜೀವನಕ್ಕಾಗಿ ನಾವೆಲ್ಲರೂ ಪ್ರಾರ್ಥಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ ಗೌರವಾಧ್ಯಕ್ಷೆ ಹಾಗೂ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಹತ್ತೊಂದು ವರ್ಷಗಳ ಹಿಂದೆ ಕೆಲವೇ ಮಂದಿ ಸೇರಿ ಆರಂಭಿಸಿದ ಸೇವಾ ಸಂಸ್ಥೆ ಮಧ್ಯದಲ್ಲಿ ಬಾಽಸಿದ ಅಪಪ್ರಚಾರವನ್ನೂ ಮೀರಿ ಇಂದು ಸಂಘಟನಾತ್ಮಕವಾಗಿ ಬೆಳೆದಿದೆ ಎಂದರು. ತಾಳ್ಮೆ, ಸಹನೆ, ಪ್ರೀತಿ, ವಿಶ್ವಾಸ, ಸೌರ್ಹಾತೆ ಇದ್ದರೆ ಮಾತ್ರ ಸಂಸ್ಕೃತಿ ಉಳಿದು ಬೆಳೆಯಲು ಸಾಧ್ಯ. ಈ ನಿಟ್ಟಿನಲ್ಲಿ ಪುತ್ತೂರಿನ ವರಮಹಾಲಕ್ಷ್ಮಿಪೂಜೆ ಮಾದರಿಯಾಗಿದೆ ಎಂದರು.ವೇ| ಮೂ| ಹರಿಪ್ರಸಾದ್ ವೈಲಾಯ ಅವರ ಪೌರೋಹಿತ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು. ನೂರಾರು ಮಂದಿ ಮಹಿಳೆಯರು ವ್ರತಾಚರಣೆ, ಭಜನೆಯೊಂದಿಗೆ ಪೂಜೆಯಲ್ಲಿ ಪಾಲ್ಗೊಂಡರು. ಮಧ್ಯಾಹ್ನ ಮಹಾಪೂಜೆ ನಡೆದು ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.ಅನಂತರ ಬೊಳುವಾರು ಆಂಜನೇಯ ಮಹಿಳಾ ಯಕ್ಷಗಾನ ಸಂಘದಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು.ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಕುಮುದಾ ಎಲ್.ಎನ್. ಶೆಟ್ಟಿ, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಘಟಕದ ನಯನಾ ರೈ, ಕಲಾವತಿ ಜಯಂತ್ ನಡುಬಲು, ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ, ಸಮರ್ಪಣ ಮಹಿಳಾ ಸೇವಾ ಸಂಸ್ಥೆ ಅಧ್ಯಕ್ಷೆ ಗಂಗಾರತ್ನ ವಿ. ರೈ, ನ್ಯಾಯವಾದಿ ಹರಿಣಾಕ್ಷಿ ಜೆ. ಶೆಟ್ಟಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

Leave a Reply