Header Ads
Header Ads
Breaking News

ಸಾಸ್ತಾನ-ಗುಂಡ್ಮಿ ಟೋಲ್ ಕೇಂದ್ರಕ್ಕೆ ಸಾರ್ವಜನಿಕರಿಂದ ಮುತ್ತಿಗೆ ಯತ್ನ:ಪೊಲೀಸರು-ಪ್ರತಿಭಟನಾಕಾರರ ಮದ್ಯೆ ತಳ್ಳಾಟ

ಕುಂದಾಪುರ: ಸ್ಥಳೀಯ ವಾಹನಗಳಿಂದ ಸುಂಕ ಸಂಗ್ರಹ ವಿರೋಧಿಸಿ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಸುಮಾರು ಐನೂರಕ್ಕೂ ಅಧಿಕ ಮಂದಿ ಸಾಸ್ತಾನ-ಗುಂಡ್ಮಿ ಟೋಲ್ ಕೇಂದ್ರಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ.ಸಾಸ್ತಾನ ಶಿವಕೃಪಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ಕರೆದ ತುರ್ತು ಸಭೆಯಲ್ಲಿ ಪಾಲ್ಗೊಂಡ ಬಳಿಕ ಸಾರ್ವಜನಿಕರು ದಿಢೀರ್ ಆಗಿ ಸಾಸ್ತಾನ ಟೋಲ್ ಕೇಂದ್ರಕ್ಕೆ ಮೆರವಣಿಗೆ ಮೂಲಕ ಆಗಮಿಸಿ ಮುತ್ತಿಗೆ ಹಾಕಲು ಯತ್ನಿಸಿದರು. ಸ್ಥಳದಲ್ಲಿ ನಿಯೋಜನೆಗೊಂಡಿದ್ದ ಪೊಲೀಸರು ಪ್ರತಿಭಟನಾಕಾರರನ್ನು ತಡೆಹಿಡಿದರು. ಬಳಿಕ ತಮಗೆ ಮುಂದೆ ಸಾಗಲು ಅನುವು ಮಾಡಿಕೊಡಿ ಎಂದು ಪೊಲೀಸರಲ್ಲಿ ಪ್ರತಿಭಟನಕಾರರು ಮನವಿ ಮಾಡಿಕೊಂಡ ನಂತರ ಸಾಸ್ತಾನ ಟೋಲ್‌ಗೇಟ್ ಪ್ರವೇಶಿಸಿ ಗುಂಡ್ಮಿ ತನಕ ಬಂದು ಮತ್ತೆ ಟೋಲ್ ಕೇಂದ್ರದ ಎದುರು ಜಮಾಯಿಸಿ ನವಯುಗ ಕಂಪೆನಿ ಹಾಗೂ ಪೊಲೀಸ್ ಇಲಾಖೆಯ ವಿರುದ್ದ ಧಿಕ್ಕಾರಗಳನ್ನು ಕೂಗಿ ಆಕ್ರೋಶ ಹೊರಗೆಡವಿದರು.ಸ್ಥಳಕ್ಕಾಗಮಿಸಿದ ಡಿವೈಎಸ್ಪಿ ಜಯಶಂಕರ್ ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು. ಇವ್ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರು ಪೊಲೀಸರ ವಿರುದ್ದ ಆರೋಪಗಳ ಸುರಿಮಳೆ ಸುರಿಸಿದರು. ಟೋಲ್ ಕೇಂದ್ರದಲ್ಲಿ ಸ್ಥಳೀಯರೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸುತ್ತಿದ್ದು, ಬೆದರಿಕೆಯೊಡ್ಡಿ ಸುಂಕ ವಸೂಲಿ ಮಾಡುತ್ತಿದ್ದಾರೆ. ಟೋಲ್ ಸಿಬ್ಬಂದಿಗಳ ರೀತಿಯಲ್ಲಿ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕುತ್ತರಿಸಿದ ಡಿವೈಎಸ್ಪಿ ಜಯಶಂಕರ್ ನಿಮ್ಮ ಆರೋಪಗಳಿಗೆ ದಾಖಲೆಗಳಿದ್ದರೆ ಕೊಡಿ. ಅಂತಹ ಪೊಲೀಸ್ ಸಿಬ್ಬಂದಿಗಳ ವಿರುದ್ದ ನಾನು ಕ್ರಮಕೈಗೊಳ್ಳುತ್ತೇನೆ ಎಂದರೂ ವಾಗ್ವಾದ ತಾರಕಕ್ಕೇರಿತು. ಬಳಿಕ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

Related posts

Leave a Reply