Header Ads
Header Ads
Header Ads
Breaking News

ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣ ಮಂಜೇಶ್ವರ ಪ್ರೆಸ್‌ಕ್ಲಬ್‌ನಿಂದ ಖಂಡನಾ ಸಭೆ

 

ಪತ್ರಕರ್ತೆ, ಸಾಹಿತಿ ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸಿ ಮಂಜೇಶ್ವರ ಪ್ರೆಸ್‌ಕ್ಲಬ್ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ವಿವಿಧ ಸಾಮಾಜಿಕ ಮುಖಂಡರುಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಖಂಡನಾ ಸಭೆ ನಡೆಯಿತು.

ಪ್ರೆಸ್ ಕ್ಲಬ್ ಅಧ್ಯಕ್ಷ ಆರಿಫ್ ಮಚ್ಚಂಪಾಡಿ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಸಭೆಯನ್ನು ಹಿರಿಯ ಸಾಮಾಜಿಕ ಕಾರ್ಯಕರ್ತ ಸತೀಶ್ ಅಡಪ ಸಂಕಬೈಲು ಉದ್ಘಾಟಿಸಿದರು. ಬಳಿಕ ಮಾತನಾಡಿದರ ಅವರು ಗೌರಿ ಲಂಕೇಶ್ ಹತ್ಯೆ ಖಂಡನೀಯ, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ಸರಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿವಿಧ ಸಾಮಾಜಿಕ ಕಾರ್ಯಕರ್ತರಾದ ಯಾಕೂಬ್ ಕುಂಜತ್ತೂರು , ಎಂ.ಕೆ ಮಜೀದ್ , ಮುರಳೀಧರ್ ಭಟ್, ಜಗದೀಶ್ ಮೂಡಂಬೈಲು , ಬಶೀರ್ ಕನಿಲ ಮೊದಲಾದವರು ಹಾಜರಿದ್ದರು.

Related posts

Leave a Reply