Header Ads
Header Ads
Header Ads
Breaking News

ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆಯ ವಿರುದ್ಧ ಜ.4ರಂದು ಕಾಪು ಪೇಟೆಯಲ್ಲಿ ಶಾಂತಿಯುತ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆ ಮಾರಕವಾಗಿದ್ದು, ಸಂವಿಧಾನಕ್ಕೆ ವಿರೋಧವಾಗಿದೆ. ಭಾರತದ ಜಾತ್ಯತೀತೆಯ ವಿರುದ್ಧ ಪ್ರಹಾರ ಮಾಡುವ ಕಾನೂನು ಆಗಿರುತ್ತದೆ ಆ ನಿಟ್ಟಿನಲ್ಲಿ ಕಾಪು ಜಾತ್ಯತೀತ ನಾಗರಿಕ ಸಮಿತಿ ನೇತೃತ್ವದಲ್ಲಿ ಜ.4ರಂದು ಕಾಪು ಪೇಟೆಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.ಅವರು ಕಾಪು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಜಾತ್ಯಾತೀತತೆ ಮತ್ತು ಸಹೋದರತ್ವಕ್ಕೆ ತಿಲಾಂಜಲಿಯಿಟ್ಟು ಪ್ರಜಾಪ್ರಭುತ್ವ ವ್ಯವಸ್ಥೆಗೇ ಮಾರಕವಾಗುವ ಜನವಿರೋಧಿ ಕಾನೂನುಗಳನ್ನು ಅಸಾಂವಿಧಾನಿಕವಾಗಿ ಮತ್ತು ಬಲವಂತವಾಗಿ ನಾಗರಿಕರ ಮೇಲೆ ಹೇರುವ ಹುನ್ನಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದೆ ಎಂದರು. ಈ ಸಂದರ್ಭ ಜಾತ್ಯತೀತ ನಾಗರಿಕ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನಚಂದ್ರ ಸುವರ್ಣ ಅಡ್ವೆ, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲಾಜಿ ಯೋಗೀಶ್ ಶೆಟ್ಟಿ, ಹರೀಶ್ ನಾಯಕ್ ಕಾಪು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *