Header Ads
Breaking News

ಸಿಟಿ ಬಸ್‌ಗಳಿಂದ ಸಾರ್ವಜನಿಕರಿಗೆ ತೊಂದರೆಯ ಆರೋಪ : ಬಸ್ ಮಾಲಕರ ಜೊತೆ ಸಭೆ

ಮಂಗಳೂರು ಕಮೀಷನರ್ ವ್ಯಾಪ್ತಿಯಲ್ಲಿರುವ ಸಿಟಿ ಬಸ್‌ಗಳಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಲಕ್ಷ್ಮೀಗಣೇಶ್ ಅವರು ಖಾಸಗಿ ಬಸ್ ಮಾಲಕರ ಜೊತೆಯಲ್ಲಿ ಸಭೆ ನಡೆಸಿದ್ರು. ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಪಿ ಲಕ್ಷ್ಮೀ ಗಣೇಶ್ ಮಾತನಾಡಿ, ವಾರದಲ್ಲಿ ಮೂರು ದಿನ ಆರ್‌ಟಿಓ ಹಾಗೂ ಪೊಲೀಸ್ ಅಧಿಕಾರಿಗಳ ಜೊತೆಯಲ್ಲಿ ಜಂಟಿಯಾಗಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಯಾವುದೇ ರೀತಿಯಲ್ಲಿ ಬಸ್‌ಗಳಲ್ಲಿ ಟಿಕೆಟ್ ಕೊಡದೇ ಇರುವುದು, ಅತೀ ವೇಗ ಚಲಾವಣೆ ಮಾಡುತ್ತಿರುವ ಬಸ್‌ಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಅಂತಾ ತಿಳಿಸಿದರು. ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಅಳ್ವ ಮಾತನಾಡಿ, ಈಗಾಗಲೇ ಬಸ್ ಸಿಬ್ಬಂದಿಗಳ ಜೊತೆಯಲ್ಲಿ ಚರ್ಚೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು ಅಂತಾ ತಿಳಿಸಿದರು.ಈ ವೇಳೆ ಎಸಿಪಿ ಮಂಜುನಾಥ್ ಶೆಟ್ಟಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಬಸ್ ಮಾಲಕರು ಸಭೆಯಲ್ಲಿ ಭಾಗಿಯಾಗಿದರು.

Related posts

Leave a Reply

Your email address will not be published. Required fields are marked *