Header Ads
Breaking News

ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿಗೆ ಸೂಕ್ತ ರಕ್ಷಣೆ ನೀಡಬೇಕು : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯ

 ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಹೈಕೋರ್ಟ್ ನ್ಯಾಯಮೂರ್ತಿ ಕೈಗೆತ್ತಿಗೊಂಡು ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಒತ್ತಾಯಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಡಿ ಪ್ರಕರಣ ಬೆಳಕಿಗೆ ಬಂದು ಒಂದು ತಿಂಗಳಾದರೂ ಆರೋಪಿ ಸ್ಥಾನದಲ್ಲಿರುವ ರಮೇಶ್ ಜಾರಕಿಹೊಳಿಯವರ ಬಂಧನವಾಗಿಲ್ಲ. ಆದರೆ ಅವರು ಹಾದಿ ಬೀದಿಯಲ್ಲಿ ಮಾತನಾಡುವ ಜತೆಗೆ ಸಾರ್ವಜನಿಕವಾಗಿ ಓಡಾಡಿಕೊಂಡಿದ್ದು, ಸಿಐಟಿಯನ್ನೂ ತಮ್ಮ ಹತೋಟಿಯಲ್ಲಿರಿಸಿ ಸಾಕ್ಷಿ ನಾಶ ಮಾಡುವ ಅನುಮಾನ ಇದೆ ಎಂದು ಆರೋಪಿಸಿದರು.
ಇನ್ನು ಬೆಳಗಾವಿಯ ಲೋಕಸಭೆ ಹಾಗೂ ಮಸ್ಕಿ ಹಾಗೂ ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಸಕ್ತ ವಿದ್ಯಮಾನಗಳಿಂದ ಸರಕಾರ ಹತಾಶೆಗೊಂಡಿದೆ. ಅದಕ್ಕಾಗಿ ರಮೇಶ್ ಜಾರಕಿಹೊಳಿಯವರ ಬೆಂಬಲಿಗರೆನ್ನಲಾದವರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕಾರಿನ ಮೇಲೆ ದಾಳಿ, ಕಲ್ಲು ತೂರಾಟ, ಪೊಲೀಸ್ ಬೆಂಗಾವಲು ವಾಹನದ ಮೇಲೆ ಚಪ್ಪಲಿ ಎಸೆಯುವ ಪ್ರಕರಣವನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ ಎಂದವರು ಹೇಳಿದರು.
ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಟಿ.ಕೆ. ಸುಧೀರ್, ನೀರಜ್‍ಪಾಲ್, ಮುರಳೀದರ ರೈ, ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್, ಬ್ಲಾಕ್ ಅಧ್ಯಕ್ಷ ಸುರೇಂದ್ರ ಕಾಂಬ್ಳಿ, ಕಾರ್ಮಿಕ ವಿಭಾಗದ ಅಧ್ಯಕ್ಷ ಲಾರೆನ್ಸ್ ಡಿಸೋಜಾ, ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *