Header Ads
Header Ads
Breaking News

ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿಕಾರಿದ ಪೂಜಾರಿ..! ಸುದ್ದಿಗೋಷ್ಟಿಯಲ್ಲಿ ಹೇಳಿದ್ದೇನು..?

ಮಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದೆ. ಆದ್ರೆ ಪಕ್ಷದ ಅಭ್ಯರ್ಥಿಗಳ ಆಯ್ಕೆಯ ವಿಚಾರಕ್ಕೆ ಸಂಬಂಧಿಸಿ ತನ್ನ ಸಲಹೆ ಸೂಚನೆ ಪಡೆದಿದ್ದೇವೆ ಎಂಬ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಹೇಳಿಕೆ ಸುಳ್ಳು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಚಿವ ಜನಾರ್ಧನ ಪೂಜಾರಿ ಹೇಳಿದ್ರು.

ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಸತ್ಯಕ್ಕೆ ದೂರವಾದ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ಹೇಳಿಕೆಗಾಗಿ ಇಂದು ಸಂಜೆಯೊಳಗೆ ಕ್ಷಮೆಯಾಚಿಸಬೇಕು. ಇಲ್ಲವಾದ್ರೆ ಅವರನ್ನು ಸುಮ್ಮನೆ ಬಿಡೋದಿಲ್ಲ ಪೂಜಾರಿ ಇಲ್ಲದಿದ್ದರೂ ಗೆಲ್ಲಬಹುದೆಂಬ ಭಾವನೆ ಕಾಂಗ್ರೆಸ್‌ನ ಕೆಲವು ನಾಯಕರಲ್ಲಿದೆ. ಅದನ್ನು ತೋರಿಸಿಕೊಡಲಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ, ಅವರು ಪಕ್ಷವನ್ನು ಮುಗಿಸಿಯೇ ಹೋಗುವುದು. ಅವರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು, ಹೈಕಮಾಂಡ್ ಮಾಡುತ್ತಿದೆ. ಈ ಹೇಳಿಕೆ ಬಗ್ಗೆ ತನ್ನ ವಿರುದ್ಧ ದೂರು ನೀಡಲಿ, ಪಕ್ಷದಿಂದ ತೆಗೆದು ಹಾಕಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರಾದ ಕಳ್ಳಿಗೆ ತಾರಾನಾಥ್ ಶೆಟ್ಟಿ, ಮಾಜಿ ಶಾಸಕ ವಿಜಯ್ ಕುಮಾರ್ ಶೆಟ್ಟಿ, ಶಶಿರಾಜ್ ಅಂಬಟ್, ಕರುಣಾಕರ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *